ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

"ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Apr 8, 2025 - 11:03
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
D K SHIVAKUMAR

ಬೆಂಗಳೂರು, ಏ.08

"ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ" ಎಂದು ವ್ಯಂಗ್ಯವಾಡಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.