ದ್ವೇಷ ಭಾಷಣಕ್ಕೆ ಮೂಗುದಾರ ಹಾಕಲು ಸಜ್ಜಾದ ಸರ್ಕಾರ

ರಾಜ್ಯ ಕಾಂಗ್ರೆಸ್​ ಸರ್ಕಾರ ದ್ವೇಷ ಭಾಷಣವನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

Dec 4, 2025 - 16:24
ದ್ವೇಷ ಭಾಷಣಕ್ಕೆ ಮೂಗುದಾರ ಹಾಕಲು ಸಜ್ಜಾದ ಸರ್ಕಾರ
cabinet meeting
ರಾಜ್ಯ ಕಾಂಗ್ರೆಸ್​ ಸರ್ಕಾರ ದ್ವೇಷ ಭಾಷಣವನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ ವಿಧೇಯಕ- 2025 ಅನುಮೋದನೆ ಸಿಗುವ ಸಾಧ್ಯತೆಗಳಿವೆ. 
ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ  ವಿಧೇಯಕ- 2025 ಅನುಮೋದನೆ ಸಿಗುವ ಸಾಧ್ಯತೆಗಳಿವೆ. 
ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತೀಯ ಕಲಹಗಳಿಗೆ ದ್ವೇಷ ಭಾಷಣ ಕಾರಣವಾಗಿದೆ. ಮತೀಯವಾದಿ ಸಂಘಟನೆಗಳ ಸಮಾವೇಶಗಳಲ್ಲಿ ದ್ವೇಷ ಭಾಷಣ ಮಾಡುವ ಮೂಲಕ ಜನರನ್ನು ಪ್ರಚೋದನೆ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ವಿಧೇಯಕವನ್ನು ಮಂಡಿಸಲಿವೆ.

ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ ವಿಧೇಯಕದಲ್ಲೇನಿದೆ?
  1. ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವುದು ಅಪರಾಧ
  2. ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲು ಅವಕಾಶ ಅಥವಾ 5 ಸಾವಿರ ರೂಪಾಯಿವರೆಗೆ ದಂಡ
  3. ದ್ವೇಷ ಭಾಷಣವನ್ನು ಉತ್ತೇಜಿಸುವಂತೆ ಉದ್ದೇಶಪೂರ್ವಕವಾಗಿ ಪ್ರಕಟಿಸುವವರು, ಪ್ರಚಾರ ಮಾಡುವವರು, ಸಮರ್ಥಿಸುವವರನ್ನ ಶಿಕೆಗೆ ಗುರಿಪಡಿಸಲು ಅವಕಾಶ
  4. ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಇದರಲ್ಲಿ ಒಳಗೊಂಡಿದೆ.
  5. ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂಗಳು ಸಾಫ್ಟ್‌ವೇ‌ರ್ ಮತ್ತು ಡೇಟಾಬೇಸ್‌ಗಳು ಅಥವಾ ಮೈಕ್ರೋಫಿಲ್ಡ್ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದ ವ್ಯಾಪ್ತಿಗೆ ಒಳಪಡಿಸುವ ಸಾಧ್ಯತೆ ಇದೆ
  6. ದ್ವೇಷ ಭಾಷಣ ಪ್ರಸಾರ ಮಾಡುವ ವಾಹಿನಿಗಳು (ಚಾನೆಲ್‌ಗಳು), ಟೆಲಿಕಾಂ ಸೇವಾ ಪೂರೈಕೆದಾರರು, ನೆಟ್ವರ್ಕ್ ಸೇವಾ ಪೂರೈಕೆದಾರರು, ಇಂಟರ್ನೆಟ್ ಸೇವಾ ಪೂರೈಕೆದಾರರು, ವೆಬ್‌ಹೋಸ್ಟಿಂಗ್ ಸೇವಾ ಪೂರೈಕೆದಾರರು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್ ಇಂಜಿನ್‌ಗಳು ಆನ್‌ಲೈನ್‌ ಪಾವತಿ ಸೈಟ್‌ಗಳು, ಆನ್‌ಲೈನ್-ಹರಾಜು ಸೈಟ್‌ಗಳು, ಆನ್‌ಲೈನ್-ಮಾರುಕಟ್ಟೆಗಳು ಮತ್ತು ಸೈಬರ್ ಕೆಫೆಗಳನ್ನೂ ಇದರ ವ್ಯಾಪ್ತಿಗೆ ಸೇರಿಸುವ ಸಾಧ್ಯತೆ ಇದೆ.