ಭಾರತೀಯ ಸೈನಿಕರ ಶ್ರೇಯಸ್ಸಿ ಗಾಗಿ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ- ಜಮೀರ್ ಅಹಮದ್ ಖಾನ್

ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

May 8, 2025 - 13:47
ಭಾರತೀಯ ಸೈನಿಕರ ಶ್ರೇಯಸ್ಸಿ ಗಾಗಿ  ಮಸೀದಿಗಳಲ್ಲಿ  ಶುಕ್ರವಾರ ವಿಶೇಷ ಪ್ರಾರ್ಥನೆ- ಜಮೀರ್ ಅಹಮದ್ ಖಾನ್
ಜಮೀರ್ ಅಹಮದ್ ಖಾನ್

ಬೆಂಗಳೂರು :ಪೆಹಲ್ಗಮ್  ದಾಳಿ ಹಿನ್ನೆಲೆಯಲ್ಲಿ  ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ  ರಾಜ್ಯದ ಎಲ್ಲ ಮಸೀದಿಗಳಲ್ಲಿ  ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.