ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬಸವರಾಜ ಬೊಮ್ಮಾಯಿ

ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

May 7, 2025 - 15:17
ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿದ್ದ ಪಾಕ್ ಪೋಷಿತ  ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದ್ದು, ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ದಾಳಿ ನಡೆದಿದ್ದು, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದಕರ ನೆಲೆಗಟ್ಟು ಮತ್ತು ತರಬೇತಿ ನೀಡುವ ಫ್ಯಾಕ್ಟರಿ ಆಗಿ ಪರಿವರ್ತನೆ ಆಗಿದೆ. ಇದು ಕೇವಲ ಭಾರತ ಅಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸ ಭಾರತೀಯ ಸೇನೆ ಮಾಡಿದೆ. ಇದು ಇನ್ನೂ ಪ್ರಾರಂಭ ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕರಿರುವವರೆಗೂ ಈ ಕಾರ್ಯಾಚರಣೆ ನಡೆಯುತ್ತದೆ ಎಂದು ಹೇಳಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.