ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ 2 ಬದಲಾವಣೆ ಸಾಧ್ಯತೆ

2ನೇ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಸೂರ್ಯಕುಮಾರ್‌ &ಟೀಂ ಇದೆ.

Nov 13, 2024 - 12:07
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ 2 ಬದಲಾವಣೆ ಸಾಧ್ಯತೆ
2 changes are likely in Team India playing XI

ಭಾರತ ಮತ್ತು  ನಡುವಣ ಮೂರನೇ ಟಿ20 ಪಂದ್ಯ ಇಂದು (ನ.13) ನಡೆಯಲಿದೆ. ಸೆಂಚುರಿಯನ್​ನ ಸೂಪರ್​​ ಸ್ಪೋರ್ಟ್ಸ್​ ಪಾರ್ಕ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದ್ದು, ಹೀಗಾಗಿ ಈ ಪಂದ್ಯದಿಂದ ಇಬ್ಬರನ್ನು ಕೈ ಬಿಡಬಹುದು.

ಅದರಂತೆ ಈ ಬಾರಿ ಅಕ್ಷರ್ ಪಟೇಲ್​ ಬದಲಿಗೆ ರಮಣ್​ದೀಪ್ ಸಿಂಗ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಹಾಗೆಯೇ ಅವೇಶ್ ಖಾನ್ ಸ್ಥಾನದಲ್ಲಿ ಯಶ್ ದಯಾಳ್ ಕಣಕ್ಕಿಳಿಯಬಹುದು.ಇದಾಗ್ಯೂ ಟೀಮ್ ಇಂಡಿಯಾ ಆರಂಭಿಕನಾಗಿ ಸಂಜು ಸ್ಯಾಮ್ಸನ್​ ಜೊತೆ ಅಭಿಷೇಕ್ ಶರ್ಮಾ ಮುಂದುವರೆಯಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಎಡಗೈ ದಾಂಡಿಗ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ.

ಇನ್ನು ಬೌಲರ್​ಗಳಾಗಿ ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ ಹಾಗೂ ಯಶ್ ದಯಾಳ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ನನ ಆಟಗಾರರಗಿರುತ್ತಾರೆ.