Mahindra: ಸದ್ದಿಲ್ಲದೇ 2026ರ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ ಬಿಡುಗಡೆ... ಬೆಲೆ ಎಷ್ಟು?

Mahindra Scorpio N Facelift: 2026ರ 'ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್' ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Aug 5, 2026 - 16:12
Mahindra: ಸದ್ದಿಲ್ಲದೇ 2026ರ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ ಬಿಡುಗಡೆ... ಬೆಲೆ ಎಷ್ಟು?

ಸದ್ದಿಲ್ಲದೇ 2026ರ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ (Mahindra Scorpio N Facelift) ಎಸ್‌ಯುವಿ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ. 

ಇದು ರೂ.13.69 ಲಕ್ಷದಿಂದ ರೂ.25.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಡ್2, ಜಡ್4, ಜಡ್6, ಜಡ್8ಎಸ್, ಜಡ್8 ಹಾಗೂ ಜಡ್8ಟಿ ಸೇರಿದಂತೆ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಈ ಕಾರು ನೋಡುಗರ ಕಣ್ಣು ಕುಕ್ಕುವಂತಹ ನವೀನವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ವರ್ಟಿಕಲ್ ಕ್ರೋಮ್ ಸ್ಲ್ಯಾಟ್‌ಗಳನ್ನು ಹೊಂದಿರುವ ಬ್ಲ್ಯಾಕ್ ಗ್ರಿಲ್, ದೊಡ್ಡದಾದ ಡ್ಯುಯಲ್-ಪಾಡ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್, ಶಾರ್ಕ್‌ಫಿನ್ ಆಂಟೆನಾ, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಹಾಗೂ ಸಿಗ್ನೇಚರ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ. 

ನೂತನ 'ಸ್ಕಾರ್ಪಿಯೋ ಎನ್' ಗ್ಯಾಲಕ್ಸಿ ಗ್ರೇ, ಓಷಿಯಾನಿಕ್, ಎವರೆಸ್ಟ್ ವೈಟ್, ಡೀಪ್ ಫಾರೆಸ್ಟ್ ಹಾಗೂ ಸ್ಟೆಲ್ತ್ ಬ್ಲಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 6/ 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಥರ್ಡ್ ರೋ ಮಡಚಿದರೆ, 768 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ ದೊರೆಯುತ್ತದೆ. 

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಮೊದಲ 2-ಲೀಟರ್ ಎಂಸ್ಟಾಲಿಯನ್ ಟರ್ಬೊ-ಪೆಟ್ರೋಲ್ ಎಂಜಿನ್, 203 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 

ಮತ್ತೊಂದು 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್, 175 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 400 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 

ಈ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 65ಡಬ್ಲ್ಯೂ ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಪನೋರಮಿಕ್ ಸನ್‌ರೂಫ್, ಡ್ಯುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಕನೆಕ್ಟ್ಡ್ ಕಾರ್ ಟೆಕ್, 12-ಸ್ಪೀಕರ್ ಸೋನಿ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 

ಹೊಸ 'ಸ್ಕಾರ್ಪಿಯೋ ಎನ್' ಸುರಕ್ಷತೆಗೆ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಫ್ರಂಟ್-ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.