Maruti Baleno: 33.61 Km ಮೈಲೇಜ್.. 6 ಲಕ್ಷ.. ಹೊಸ ಮಾರುತಿ ಬಲೆನೊ ಫೇಸ್‌ಲಿಫ್ಟ್ ಡೀಲರ್‌ಶಿಪ್‌ಗೆ ಬಂದೇ ಬಿಡ್ತು!

Maruti Suzuki Baleno: ಸದ್ಯ, ದೇಶಾದ್ಯಂತ 'ಮಾರುತಿ ಸುಜುಕಿ ಬಲೆನೊ ಫೇಸ್‌ಲಿಫ್ಟ್' ಕಾರನ್ನು ಡೀಲರ್‌ಶಿಪ್‌ಗಳಿಗೆ ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ.

Sep 8, 2026 - 20:26
Sep 8, 2026 - 20:27
Maruti Baleno: 33.61 Km ಮೈಲೇಜ್.. 6 ಲಕ್ಷ.. ಹೊಸ ಮಾರುತಿ ಬಲೆನೊ ಫೇಸ್‌ಲಿಫ್ಟ್  ಡೀಲರ್‌ಶಿಪ್‌ಗೆ ಬಂದೇ ಬಿಡ್ತು!
ಚಿತ್ರಕೃಪೆ @ Carwale

2026ರ ಮಾರುತಿ ಸುಜುಕಿ ಬಲೆನೊ ಫೇಸ್‌ಲಿಫ್ಟ್ (Maruti Suzuki Baleno Facelift) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಈಚೆಗೆ ಅದ್ದೂರಿಯಾಗಿ ಬಿಡುಗಡೆಗೊಂಡಿತ್ತು. ಸದ್ಯ, ದೇಶಾದ್ಯಂತ ಈ ಕಾರನ್ನು ಡೀಲರ್‌ಶಿಪ್‌ಗಳಿಗೆ ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದ್ದು, ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ವಿತರಣೆಗಳು ಕೂಡ ಶುರುವಾಗಲಿದೆ.

ಈ ಹ್ಯಾಚ್‌ಬ್ಯಾಕ್ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.10 ಲಕ್ಷ ಆರಂಭಿಕ ದರವನ್ನು (ಎಕ್ಸ್-ಶೋರೂಂ) ಹೊಂದಿದೆ. ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಫಾ ಹಾಗೂ ಆಲ್ಫಾ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಬಲೆನೊ' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ವೆಪ್ಟ್-ಬ್ಯಾಕ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಕರ್ವಿ ರೂಫ್‌ಲೈನ್, ಕ್ರೋಮ್ ಡೋರ್ ಹ್ಯಾಂಡಲ್‌ಗಳು, ಎಲ್ಇಡಿ ಇಂಡಿಕೇಟರ್‌ಗಳು, ಶಾರ್ಕ್‌ಫಿನ್ ಆಂಟೆನಾ, 'ಸಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. 

ಇದು 3,990 ಎಂಎಂ ಉದ್ದ, 1745 ಎಂಎಂ ಅಗಲ, 1.530 ಎಂಎಂ ಹಾಗೂ 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಎನಿಗ್ಮ್ಯಾಟಿಕ್ ಟೀಲ್, ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಆಫ್ಯುಲೆಂಟ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 

ಈ ಕಾರು ಅತ್ಯುತ್ತಮವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 23.80 ರಿಂದ 24.77 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 

ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಸಿಎನ್‌ಜಿ ಎಂಜಿನ್, 70  ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 33.6 ಕಿ.ಮೀ ವರೆಗೆ ಕೊಡುತ್ತದೆ. 

ಹೊಸ 'ಬಲೆನೊ' ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಟ್ವಿನ್-ಡಯಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಕ್ಲಾರಿಯನ್ ಸೌಂಡ್ ಸಿಸ್ಟಮ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಹೆಡ್-ಅಪ್ ಡಿಸ್ಪ್ಲೇ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್),  ಹಿಲ್ ಹೋಲ್ಡ್ ಅಸಿಸ್ಟ್, ರಿಯರ್ ವಾಷರ್, ವೈಪರ್ & ಡಿಫಾಗರ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Image Source Link: Carwale

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.