Tata Aeris: ನಂ.1 ಮಾರುತಿ ಡಿಜೈರ್ ಪ್ರತಿಸ್ಪರ್ಧಿ ಟಾಟಾ ಏರಿಸ್ ಬಿಡುಗಡೆ.. ಬರೀ 5.29 ಲಕ್ಷ ರೂ!
Tata Aeris: ಬಹುನಿರೀಕ್ಷಿತ 'ಟಾಟಾ ಏರಿಸ್' ಸೆಡಾನ್ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ರೂ.5.29 ಲಕ್ಷ ಆರಂಭಿಕ ದರವನ್ನು ಪಡೆದಿದೆ.
Tata Aeris: ಬಹುನಿರೀಕ್ಷಿತ 'ಟಾಟಾ ಏರಿಸ್' ಸೆಡಾನ್ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಸದ್ಯವಿರುವ 'ಟಿಗೂರ್' ಕಾರಿಗೆ ಬದಲಿ ಆಯ್ಕೆಯಾಗಿದೆ.
ಈ ಸೆಡಾನ್ ರೂ. 5.29 ಲಕ್ಷದಿಂದ ರೂ.8.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್ (Smart), ಪ್ಯೂರ್ (Pure), ಪ್ಯೂರ್ ಪ್ಲಸ್ (Pure Plus), ಕ್ರಿಯೇಟಿವ್ (Creative) ಹಾಗೂ ಅಕಾಂಪ್ಲಿಶ್ಡ್ (Accomplished) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಈಗಾಗಲೇ ಬುಕ್ಕಿಂಗ್ ಚಾಲ್ತಿಯಲ್ಲಿದ್ದು, ನವೆಂಬರ್ 11 ರಿಂದ ವಿತರಣೆಗಳು ಶುರುವಾಗಲಿವೆ.
ನೂತನ 'ಏರಿಸ್' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಬ್ಲ್ಯಾಕ್ ಗ್ರಿಲ್, ಉತ್ತಮವಾದ ಬಂಪರ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್‌ಇಡಿ ಫಾಗ್ ಲ್ಯಾಂಪ್‌ಗಳನ್ನು ಪಡೆದಿದೆ.
'ನಾಚ್‌ಬ್ಯಾಕ್' ಸ್ಟೈಲ್ ರೂಫ್‌ಲೈನ್ ಇದ್ದು, ಶಾರ್ಕ್‌ಫಿನ್ ಆಂಟೆನಾ ಹಾಗೂ ಫ್ರಂಟ್ ಡೋರ್ ಮೇಲೆ 'ಏರಿಸ್' ಬ್ಯಾಡ್ಜಿಂಗ್ ನೋಡಬಹುದು. 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಹಿಂಭಾಗ (ರೇರ್) 'ಕರ್ವ್' ಕಾರಿಗೆ ಹೋಲಿಕೆಯಾಗುವ ಬೂಟ್-ಲಿಡ್ ಹಾಗೂ ರೂಫ್ ಸ್ಪಾಯ್ಲರ್ ಇದೆ. ಜೊತೆಗೆ ಎಲ್‌ಇಡಿ ಟೈಲ್‌ಲ್ಯಾಂಪ್‌ನ್ನು ತನ್ನದಾಗಿಸಿಕೊಂಡಿದೆ.
ಇದು ದಂಡೇಲಿ ಡ್ರಿಝಲ್ (ಪರ್ಪಲ್), ಡೇಟೋನಾ ಗ್ರೇ, ನೈಟ್ರೋ ಕ್ರಿಮ್ಸನ್ (ರೆಡ್), ಡ್ಯೂನ್ ಗ್ಲೋ (ಗೋಲ್ಡ್), ಪ್ಯೂರ್ ಗ್ರೇ ಹಾಗೂ ಪ್ರಿಸ್ಟೈನ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 419 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ 'ಏರಿಸ್' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 86 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯೂನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 76 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 97 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯೂನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.25-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಮುಂಭಾಗದ ಸೀಟುಗಳು, ಆಟೋ-ಫೋಲ್ಡಿಂಗ್ ಒಆರ್‌ವಿಎಂಗಳು, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ಸುರಕ್ಷತೆಗೆ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ, 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು, ಹಿಲ್ ಹೋಲ್ಡ್ ಅಸಿಸ್ಟ್, ಡ್ಯಾಶ್‌ಕ್ಯಾಮ್ ಮತ್ತು 360-ಡಿಗ್ರಿ ಕ್ಯಾಮೆರಾ ಪಡೆದಿದೆ.
ನೂತನ 'ಟಾಟಾ ಏರಿಸ್'ಗೆ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಹಾಗೂ ಹೋಂಡಾ ಅಮೇಜ್ (Honda Amaze) ಸೆಡಾನ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.