ಅಪ್ಪು ಅಗಲಿಕೆಗೆ 3 ವರ್ಷ:ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್  ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.

Oct 29, 2024 - 11:34
ಅಪ್ಪು ಅಗಲಿಕೆಗೆ 3 ವರ್ಷ:ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
3 years since Appu's separation

ಬೆಂಗಳೂರು: ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್  ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

ಅಪ್ಪು ಇಲ್ಲ ಎಂದು ಅವರ ಅಭಿಮಾನಿಗಳು ಸುಮ್ಮನೆ ಕುಳಿತಿಲ್ಲ. ಅವರ ಹೆಸರಿನಲ್ಲಿ ಸಾಕಷ್ಟು ಪುಣ್ಯದ ಕೆಲಸಗಳನ್ನು ವರ್ಷಪೂರ್ತಿ ಮಾಡುತ್ತಿದ್ದಾರೆ. ಇಂದು ಪುಣ್ಯ ಸ್ಮರಣೆ ವಿಶೇಷವಾಗಿ ಕಂಠೀರವ ಸ್ಟುಡಿಯೋದಲ್ಲಿ ಹಾಗೂ ರಾಜ್ಯದ ಮೂಲೆ ಮೂಲೆಗಳಲ್ಲೂ ಅನ್ನದಾನ, ರಕ್ತದಾನ ಶಿಬಿರಗಳು ನಡೆಯುತ್ತಿವೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಅಪ್ಪು ಅಭಿಮಾನಿ ಯಲಗಚ್ಚಿನಲ್ಲಿ ಗುಡಿಯೊಂದನ್ನ ಕಟ್ಟಿ ಅಭಿಮಾನ ಮೆರೆದಿದ್ದಾನೆ. ಅಲ್ಲೂ ಕೂಡಾ ಇಂದು ವಿಶೇಷ ಪೂಜೆ ನಡೆಯಲಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.