ಕಾಂಗ್ರೆಸ್‌ ಸರಕಾರದಿಂದ ಸಣ್ಣ ನೀರಾವರಿ ಇಲಾಖೆ ಮೂಲಕ ರಾಯಚೂರು ಜಿಲ್ಲೆಗೆ 676.85 ಕೋಟಿ ರೂಪಾಯಿ ಅನುದಾನ

ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷ ಕಾಳಜಿ

Oct 5, 2024 - 11:55
Oct 11, 2024 - 16:33
 10
ಕಾಂಗ್ರೆಸ್‌ ಸರಕಾರದಿಂದ ಸಣ್ಣ ನೀರಾವರಿ ಇಲಾಖೆ ಮೂಲಕ ರಾಯಚೂರು ಜಿಲ್ಲೆಗೆ 676.85 ಕೋಟಿ ರೂಪಾಯಿ ಅನುದಾನ

ಕಾಂಗ್ರೆಸ್‌ ಸರಕಾರದಿಂದ ಸಣ್ಣ ನೀರಾವರಿ ಇಲಾಖೆ ಮೂಲಕ ರಾಯಚೂರು ಜಿಲ್ಲೆಗೆ 676.85 ಕೋಟಿ ರೂಪಾಯಿ ಅನುದಾನ: ಸಚಿವ ಎನ್‌ ಎಸ್‌ ಭೋಸರಾಜು
- ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷ ಕಾಳಜಿ
- ಸುಸ್ಥಿರ ಕರ್ನಾಟಕ ಸಮೃದ್ದ ರಾಯಚೂರ ನಿರ್ಮಾಣಕ್ಕೆ ನಮ್ಮ ಸರಕಾರ ಬದ್ದ

ರಾಯಚೂರು ಅ. 05: ರಾಯಚೂರು ಜಿಲ್ಲೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರವು ಸುಮಾರು 676.85 ಕೋಟಿ ರೂ. ಮೊತ್ತದ ಅನುದಾನವನ್ನು ಹಂಚಿಕೆ ಮಾಡಲಾಗಿದ್ದು, ಚಿಕ್ಕಲಪರ್ವಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಬರದಿಂದ ಸಾಗಿವೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಸಿದ್ದರಾಮಯ್ಯನವರು ವಿಶೇಷ ಆದ್ಯತೆ ವಹಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ.  
    


ಸುಸ್ಥಿರ ಕರ್ನಾಟಕ, ಸಮೃದ್ಧ ರಾಯಚೂರು ನಿರ್ಮಾಣದ ಗುರಿ ಸಾಧನೆಗೆ ನಮ್ಮ ಅನ್ನದಾತರ ಕಲ್ಯಾಣ ಮೂಲಮಂತ್ರವಾಗಿದೆ. ರೈತರು ಅಭಿವೃದ್ಧಿಯಾದರೆ ಜಿಲ್ಲೆಯೂ ಅಭಿವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಈ ಭಾಗದ ನದಿ, ಕೆರೆಗಳು ಹಾಗೂ ಹಳ್ಳಗಳಿಗೆ ಚೆಕ್‌ ಡ್ಯಾಮ್‌, ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಿಣ, ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಹಾಗೂ ಅಂತರ್ಜಾಲ ಮಟ್ಟದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಸಣ್ಣ ನೀರಾವರಿ ಇಲಾಖೆಯ ಕೈಗೆತ್ತಿಕೊಂಡು, ಈ ಮೂಲಕ ರೈತರ ಬೆಳೆಗಳಿಗೆ ನೀರು ಒದಗಿಸುವುದು, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವುದು, ಸುತ್ತಮುತ್ತಲಿನ ಪ್ರದೇಶದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಗ್ರಾಮಗಳ ಮಧ್ಯೆ ಸಂಪರ್ಕ ವ್ಯವಸ್ಥೆ ಕಲ್ಪಿಸುವುದಕ್ಕೆ ಒತ್ತು ನೀಡುತ್ತಿದೆ.ಸಣ್ಣ ನೀರಾವರಿ ಇಲಾಖೆಯ ಮೂಲಕ ರಾಯಚೂರು ತಾಲ್ಲೂಕಿನ 9 ಗ್ರಾಮಗಳ ಕೆರೆಗಳ ಅಭಿವೃದ್ಧಿ ಪಡಿಸುವುದರಿಂದ 766 ಹೆಕ್ಟರ್‌ ಜಮೀನುಗಳಿಗೆ ನೀರಾವರಿ ಅನುಕೂಲವಾಗಲಿದೆ ಹಾಗೂ ಅಲ್ಲಿನ ಪ್ರದೇಶದ ಅಂತರ್ಜಲ ಮಟ್ಟ ವೃದ್ಧಿಗೆ ಸಹಕಾರಿಯಾಗಲಿದೆ. ಮಾನ್ವಿ ತಾಲ್ಲೂಕಿನಲ್ಲಿ ಸುಮಾರು 28 ಗ್ರಾಮಗಳಿಗೆ ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿ ಮತ್ತು 1995 ಹೆಕ್ಟರ್‌ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ದೇವದುರ್ಗ ತಾಲ್ಲೂಕಿನ 4 ಗ್ರಾಮಗಳಿಗೆ ಅಂತರ್ಜಲ ಅಭಿವೃದ್ಧಿ ಮತ್ತು 150 ಹೆಕ್ಟರ್‌ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಸ್ಕಿ ತಾಲ್ಲೂಕಿನ 8 ಗ್ರಾಮಗಳಿಗೆ  ಅಂತರ್ಜಲ ಅಭಿವೃದ್ಧಿ ಮತ್ತು 250 ಹೆಕ್ಟರ್‌ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಿಂದನೂರು ತಾಲ್ಲೂಕಿನ 5 ಗ್ರಾಮಗಳಿಗೆ ಅಂತರ್ಜಲ ಅಭಿವೃದ್ಧಿ ಮತ್ತು 600 ಹೆಕ್ಟರ್‌ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಗಳನ್ನು ಆರಂಭಿಸಲಾಗಿದೆ.  ಲಿಂಗಸುಗುರು ತಾಲ್ಲೂಕಿನ 2 ಗ್ರಾಮಗಳಿಗೆ ಅಂತರ್ಜಲ ಅಭಿವೃದ್ಧಿ ಮತ್ತು 95 ಹೆಕ್ಟರ್‌ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಾಯಚೂರು ಜಿಲ್ಲೆಯ ಏಳು ತಾಲೂಕುಗಳ ಸರ್ವತೋಮುಖ ಅಭಿವೃದ್ಧಿಯೊಂದಿಗೆ ಸಮೃದ್ಧ ರಾಯಚೂರು ಸುಸ್ಥಿರ ಕರ್ನಾಟಕ ನಿರ್ಮಾಣಕ್ಕೆ ನಮ್ಮ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು. ಈ ಮೂಲಕ ಸುಸ್ಥಿರ ಕರ್ನಾಟಕ ಸಮೃದ್ದ ರಾಯಚೂರ ನಿರ್ಮಾಣಕ್ಕೆ ನಮ್ಮ ಸರಕಾರ ಬದ್ದವಾಗಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.