ಅದಾನಿ ಸೇರಿ 8 ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆ ಆರೋಪ ದಾಖಲು

ಗೌತಮ್, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್

Nov 21, 2024 - 15:26
Jul 2, 2026 - 18:04
ಅದಾನಿ ಸೇರಿ 8 ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆ ಆರೋಪ ದಾಖಲು
ಅದಾನಿ ವಿರುದ್ಧ ಅರೆಸ್ಟ್ ವಾರಂಟ್

ನ್ಯೂಯಾರ್ಕ್: ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪಗಳು ದಾಖಲಾಗಿವೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಪ್ರಮುಖವಾಗಿ ಕೇಳಿಬಂದಿದೆ. ಕೆನಡಾದ ಪೆನ್ಷನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗು ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಆದ ಸೈರಿಲ್ ಕೆಬನೆಸ್ ಅವರೂ ಆರೋಪಿತರಲ್ಲಿ ಸೇರಿದ್ದಾರೆ. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರು ಈ ಪ್ರಕರಣದಲ್ಲಿ ತಳುಕುಹಾಕಿಕೊಂಡಿರುವ ಇತರ ವ್ಯಕ್ತಿಗಳು.ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ನ್ಯೂಯಾರ್ಕ್​ನ ಡಿಸ್ಟ್ರಿಕ್ಟ್ ಕೋರ್ಟ್​ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ರಾಯ್ಟರ್ಸ್ ಸುದ್ದಿಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

ಅಮೆರಿಕಲ್ಲಿ ಕೋರ್ಟ್​ನಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್​ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್​ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್​ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.