ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆಯಲ್ಲಿ ಯಶ್ ಶೆಟ್ಟಿ, 'ಅವನು ಮತ್ತೆ ಶ್ರಾವಣಿ' ಧಾರಾವಾಹಿ ನಟಿ!

Oct 9, 2024 - 04:52
 7
ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

ಯಶ್ ಶೆಟ್ಟಿ ಬಹುತೇಕ ನೆಗೆಟಿವ್ ಪಾತ್ರಗಳಲ್ಲಿ ಖ್ಯಾತರಾದವರು, ಈಗ “ಜಂಗಲ್ ಮಂಗಲ್” ಚಿತ್ರದ ಮೂಲಕ ನಾಯಕನಾಗಿ ಪರಿಚಯವಾಗಿದ್ದಾರೆ. ಇತ್ತೀಚೆಗೆ, ನಿರ್ದೇಶಕ ಸಿಂಪಲ್ ಸುನಿ ಈ ಚಿತ್ರದ ಟೈಟಲ್ ಬಿಡುಗಡೆ ಮಾಡಿ ಶುಭಕೋರಿದರು. ಚಿತ್ರವನ್ನು ರಕ್ಷಿತ್ ಕುಮಾರ್ ನಿರ್ದೇಶಿಸುತ್ತಿದ್ದಾರೆ, ಮತ್ತು ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಿಸುತ್ತಿದೆ. ಈ ಚಿತ್ರವು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುತ್ತದೆ ಚಿತ್ರವನ್ನು ಸುಬ್ರಹ್ಮಣ್ಯದ ಬಳಿಯ ಕಾಡಿನಲ್ಲಿ ಚಿತ್ರೀಕರಿಸಲಾಗಿದೆ. ಯಶ್ ಶೆಟ್ಟಿ ನಾಯಕನಾಗಿ ಮತ್ತು ಹರ್ಷಿತಾ ರಾಮಚಂದ್ರ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕ ರಕ್ಷಿತ್ ಕುಮಾರ್ ಏನಂದ್ರು?

ಪುತ್ತೂರು ಮೂಲದ ನಿರ್ದೇಶಕ ರಕ್ಷಿತ್ ಕುಮಾರ್ ಮಾತನಾಡಿ, “ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎರಡು ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ಕಾಡಿನಲ್ಲಿ ನಡೆಯುವ ಪ್ರೇಮಕಥೆಯೂ ಈ ಚಿತ್ರದಲ್ಲಿದೆ‌. ಇನ್ನು ನನಗೆ ಹತ್ತು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟು. ನನಗಿರುವ ನಿರ್ದೇಶನದ ಆಸೆಗೆ ನನ್ನ ಸ್ನೇಹಿತರು ಆಸರೆಯಾದರು. ಸಹ್ಯಾದ್ರಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣವಾಗಿದ್ದು, ಸಿಂಪಲ್ ಸುನಿ ನಮ್ಮ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ” ಎಂದರು.