ಜಮ್ಮು-ಕಾಶ್ಮೀರದಲ್ಲಿ ಒಮರ್​ ಅಬ್ದುಲ್ಲಾರ ಪಕ್ಷ ಬೆಂಬಲಿಸುವುದಾಗಿ ಘೋಷಿಸಿದ ಆಮ್ ​ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷ (ಎಎಪಿ) ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಗೆ ತನ್ನ ಬೆಂಬಲವನ್ನು ಘೋಷಿಸಿದೆ.

Oct 11, 2024 - 10:01
ಜಮ್ಮು-ಕಾಶ್ಮೀರದಲ್ಲಿ ಒಮರ್​ ಅಬ್ದುಲ್ಲಾರ ಪಕ್ಷ ಬೆಂಬಲಿಸುವುದಾಗಿ ಘೋಷಿಸಿದ ಆಮ್ ​ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷ (ಎಎಪಿ) ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಗೆ ತನ್ನ ಬೆಂಬಲವನ್ನು ಘೋಷಿಸಿದೆ. ಎಎಪಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲ ಪತ್ರವನ್ನು ಹಸ್ತಾಂತರಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಂದು ಸ್ಥಾನ ಎಎಪಿ ಖಾತೆಗೆ ಹೋಗಿದೆ, ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ದೋಡಾದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಮೆಹ್ರಾಜ್ ಮಲಿಕ್ ಗೆಲುವಿನೊಂದಿಗೆ ಎಎಪಿ ಐದನೇ ರಾಜ್ಯದಲ್ಲಿ ಯಶಸ್ಸನ್ನು ಸಾಧಿಸಿದೆ. ಮೆಹರಾಜ್ ಮಲಿಕ್ 23228 ಮತಗಳನ್ನು ಪಡೆದಿದ್ದರು. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿಜೆಪಿಯ ಗಜಯ್ ಸಿಂಗ್ ರಾಣಾ ಅವರನ್ನು 4538 ಮತಗಳ ಅಂತರದಿಂದ ಸೋಲಿಸಿದ್ದಾರೆ. ಆಮ್ ಆದ್ಮಿ ಪಕ್ಷ ಇದನ್ನು ತನ್ನ ದೊಡ್ಡ ಸಾಧನೆ ಎಂದು ಕರೆಯುತ್ತಿದೆ. ಏತನ್ಮಧ್ಯೆ, ಪಕ್ಷವು ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲವನ್ನು ಘೋಷಿಸಿತು.ಇದಕ್ಕೂ ಮುನ್ನ, ನಾಲ್ವರು ಸ್ವತಂತ್ರ ಶಾಸಕರು ಪಕ್ಷಕ್ಕೆ ಸೇರುವ ನಿರ್ಧಾರದ ನಂತರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗುರುವಾರ ಬಹುಮತ ಸಾಧಿಸಿದೆ.ಸ್ವತಂತ್ರ ಶಾಸಕರಾದ ಡಾ ರಾಮೇಶ್ವರ್ ಸಿಂಗ್, ಚೌಧರಿ ಮೊಹಮ್ಮದ್ ಅಕ್ರಮ್, ಸತೀಶ್ ಶರ್ಮಾ ಮತ್ತು ಪ್ಯಾರೆ ಲಾಲ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್​ ಬೆಂಬಲಿಸಲು ನಿರ್ಧರಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದ್ದಿದೆ. ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಜೆಕೆಎನ್​ಸಿ ಶಾಸಕಾಂಗ ಪಕ್ಷದ ನಾಯಕರಾಗಿ ಗುರುವಾರ ಆಯ್ಕೆಯಾದರು, ಅವರು ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲು ದಾರಿ ಮಾಡಿಕೊಟ್ಟರು.