ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು.

May 30, 2026 - 20:39
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ
dk shivakumar becomes CLP leader

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು.

ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು.

ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪ್ರಕಟಿಸಿ, ಚಾಲನೆ ನೀಡಿದರು.

ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.

ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು.

ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು.

ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ಅವರು ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೋರಲಿನಿಂದ ಬೆಂಬಲಿಸಿತು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.