5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ : ಷರತ್ತುಬದ್ಧ ಜಾಮೀನು ಮಂಜೂರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ.

Oct 30, 2024 - 10:59
Oct 30, 2024 - 11:17
5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ : ಷರತ್ತುಬದ್ಧ  ಜಾಮೀನು ಮಂಜೂರು
Darshan released from jail after 5 months

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌  ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌  6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಹೀಗೆ ಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು, ನಡಿಯೋಕೆ ಆಗಲ್ಲ.. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ/ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು.ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ದರ್ಶನ್ ಪರ ವಕೀಲರು ಕೇಳಿಕೊಂಡಿದ್ದರು.ಎಸ್‌ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿ, ಮೆಡಿಕಲ್ ಬೋರ್ಡ್‌ನಲ್ಲಿ ಪರೀಕ್ಷೆ ಮಾಡಿಸೋಣ. ವಿಕ್ಟೋರಿಯಾ/ಬೌರಿಂಗ್‌ನಲ್ಲಿ ಪರೀಕ್ಷೆ ಮಾಡಿಸಬಹುದು. ಮಂಡಳಿ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಆಗಬೇಕು ಎಂದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದ್ದರು.

 ದರ್ಶನ್​ಗೆ ಕೋರ್ಟ್ ಹಾಕಿದ ಷರತ್ತುಗಳಿವು

ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೆಲವು ಷರತ್ತುಗಳನ್ನು ಹಾಕಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್​ ಕೋರ್ಟ್​ಗೆ ಸಲ್ಲಿಕೆ ಮಾಡಬೇಕಿದೆ.ಈ ರೀತಿಯ ಪ್ರಕರಣದಲ್ಲಿ ಹೊರ ಬಂದ ಬಳಿಕ ವಿದೇಶಕ್ಕೆ ಹಾರುವ ಸಾಧ್ಯತೆ ಇರುತ್ತದೆ. ಹಾಗಾದಲ್ಲಿ ಅವರನ್ನು ಮರಳಿ ತರೋದು ಕಷ್ಟ. ಹೀಗಾಗಿ ಪಾಸ್​​ಪೋರ್ಟ್​ನ ಕೋರ್ಟ್​ಗೆ ಸರೆಂಡರ್ ಮಾಡಬೇಕು ಎಂದು ಕೋರ್ಟ್ ದರ್ಶನ್​ಗೆ ಸೂಚನೆ ನೀಡಿದೆ.ಫ್ಲೈಟ್ ರಿಸ್ಕ್ ಇದೆಯಾ ಎಂದು ಜಡ್ಜ್ ಪ್ರಶ್ನೆ ಮಾಡಿದ್ದರು. ಪಾಸ್​ಪೋರ್ಟ್ ವಶಕ್ಕೆ ಪಡೆಯುವ ಷರತ್ತು ವಿಧಿಸಲು ಮನವಿ ಮಾಡಿದ್ದರು. SPP ಮನವಿ ಹಿನ್ನೆಲೆ ಪಾಸ್​ಪೋರ್ಟ್ ಸರೆಂಡರ್ ಮಾಡಲು ಆದೇಶ ನೀಡಲಾಗಿದೆ.ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ.