ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್​ನ ಯುದ್ಧ ಶುರುವಾಗಿ 24 ದಿನಗಳಾಗಿವೆ. ಕದನವಿರಾಮಕ್ಕೆ ಹಲವು ದೇಶಗಳು ಮನವೊಲಿಸಲು ಪ್ರಯತ್ನಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ, ಇದೀಗ ಇರಾನ್ ಜೊತೆಗಿನ ಉದ್ವಿಗ್ನತೆಯನ್ನು ತಗ್ಗಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್ ಜೊತೆ'ಉತ್ಪಾದಕ' ಮಾತುಕತೆಗಳು ನಡೆದಿದ್ದು, ಟೆಹ್ರಾನ್​ನ ಮೇಲಿನ ವಿದ್ಯುತ್ ಸ್ಥಾವರದ ಮೇಲಿನ ದಾಳಿಗಳು ಸ್ಥಗಿತಗೊಂಡಿವೆ ಎಂದು ಹೇಳಿದ್ದಾರೆ.

Mar 23, 2026 - 17:32
ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ
Donald Trump

ಇರಾನ್ ಜೊತೆಗಿನ ಯುದ್ಧದ ಕಾರ್ಮೋಡ ಸರಿಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಪರಿಣಾಮವನ್ನು ಗಲ್ಫ್ ರಾಷ್ಟ್ರಗಳೂ ಅನುಭವಿಸಿದ್ದವು. ಇದರ ಪರೋಕ್ಷ ಪರಿಣಾಮವನ್ನು ಭಾರತ ಸೇರಿದಂತೆ ಇತರೆ ದೇಶಗಳೂ ಅನುಭವಿಸಿದ್ದವು. ಜಗತ್ತಿನಾದ್ಯಂತ ತೈಲ, ಇಂಧನದ ಬಿಕ್ಕಟ್ಟು ಎದುರಾಗಿದೆ. ಯುದ್ಧ ಶುರುವಾಗಿ 24 ದಿನಗಳ ನಂತರ ಇದೀಗ ಈ ಯುದ್ಧಕ್ಕೆ ತೆರೆ ಬೀಳುವ ಲಕ್ಷಣಗಳೂ ಗೋಚರಿಸುತ್ತಿವೆ.