ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

ಬೆಂಗಳೂರಿನ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬ್ರಹ್ಮ ರಥೋತ್ಸವದ ಹಿನ್ನೆಲೆಯಲ್ಲಿ ಮಾರ್ಚ್ 27 ರಿಂದ 29 ರವರೆಗೆ ಮೈಸೂರು ರಸ್ತೆಯಲ್ಲಿ ಸಂಚಾರ ವ್ಯವಸ್ಥೆಯನ್ನು ಮಾರ್ಪಾಡು ಮಾಡಲಾಗಿದೆ.

Mar 27, 2026 - 11:13
ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ
traffic

ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ. 

ಸಂಚಾರ ನಿರ್ಬಂಧ ಎಲ್ಲೆಲ್ಲಿ?

  • ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ: ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
  • ಭಾರೀ ವಾಹನಗಳಿಗೆ ಸೂಚನೆ: ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವ ಭಾರೀ ವಾಹನಗಳನ್ನು ಹೊರತುಪಡಿಸಿ, ಉಳಿದ ವಾಹನಗಳಿಗೆ ಎಂದಿನಂತೆ ಸಂಚರಿಸಲು ಅವಕಾಶ ನೀಡಲಾಗಿದೆ.

ಮಾರ್ಚ್ 27ರ ಬೆಳಿಗ್ಗೆ 07 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು

  1. ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್‌ನಿಂದ ಮೈಸೂರು ರಸ್ತೆ ಕಡೆಗೆ ಹೋಗುವವರು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ತಲುಪಬೇಕು. ಅಲ್ಲಿಂದ ಎಡ ತಿರುವು ಪಡೆದು ಕೆ.ಇ.ಬಿ. ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು (ದೇವೇಗೌಡ ಸರ್ಕಲ್) ಮುಖಾಂತರ ನಾಯಂಡಹಳ್ಳಿ ಹತ್ತಿರ ಮೈಸೂರು ರಸ್ತೆಯನ್ನು ಸೇರಬಹುದು.
  2. ಮೈಸೂರು ರಸ್ತೆ ಮೇಲ್ಸೇತುವೆ ಬಳಸುವ ಸರಕು ವಾಹನಗಳು ಮೈಸೂರು ರಸ್ತೆ ವೆಟನರಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಗುಡ್ ಶೆಡ್ ರಸ್ತೆ ಮೂಲಕ ಶಾಂತಲಾ ಜಂಕ್ಷನ್ – ಕೋಡೆ ಸರ್ಕಲ್ – ಲುಲು ಮಾಲ್ – ಹುಣಸೇಮರ ಜಂಕ್ಷನ್ ಮೂಲಕ ಮಾಗಡಿ ರಸ್ತೆಯತ್ತ ಸಂಚರಿಸಬಹುದು.
  3. ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವವರು (ಮಾರ್ಚ್ 28-29ರ ವಿಶೇಷ ಸೂಚನೆ) ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆಯಬೇಕು. ಚಂದ್ರಾ ಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆ ಮುಖಾಂತರ ಎಂ.ಸಿ. ಸರ್ಕಲ್ ತಲುಪಿ ಮಾಗಡಿ ರಸ್ತೆ ಸೇರಬಹುದು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.