ಭಾರೀ ಮಳೆ ಎಚ್ಚರಿಕೆ.

ದೇಶದ 12 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ರಾಜ್ಯಗಳು ಮತ್ತು ಕೇರಳ, ದಕ್ಷಿಣ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Oct 7, 2024 - 04:14
Oct 7, 2024 - 04:16
 1
ಭಾರೀ ಮಳೆ ಎಚ್ಚರಿಕೆ.

ದೇಶದ 12 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ರಾಜ್ಯಗಳು ಮತ್ತು ಕೇರಳ, ದಕ್ಷಿಣ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬಂಗಾಳಕೊಲ್ಲಿ ಮತ್ತು ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಪ್ರದೇಶದ ಕರಾವಳಿಯ ಸುತ್ತಲೂ ಚಂಡಮಾರುತದ ಅಬ್ಬರ ಜೋರಾಗಿರಲಿದೆ. ಪರಿಣಾಮ ಭಾರೀ ಮಳೆ ಬೀಳಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ನಾಗಲ್ಯಾಂಡ್​ನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮತ್ತೆ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಭಾರೀ ಮತ್ತು ಲಘು ಮಳೆಯಾಗುವ ಸಾಧ್ಯತೆ ಇದೆ. ಸಹರಾನ್‌ಪುರ, ಮುಜಾಫರ್‌ನಗರ, ಶಾಮ್ಲಿ, ಬಾಗ್‌ಪತ್, ಮೀರತ್, ಫತೇಪುರ್‌ನಲ್ಲಿ ಮಳೆಯಾಗಬಹುದು ಎಂದಿದೆ. ಬಿಹಾರದಲ್ಲಿ ಮಳೆ ಎಚ್ಚರಿಕೆ ಇಲ್ಲ. ಇಲ್ಲಿ ಹವಾಮಾನವು ಸಾಮಾನ್ಯವಾಗಿರುತ್ತದೆ. ಅಕ್ಟೋಬರ್ 11ರ ನಂತರ ಮಳೆ ಬೀಳುವ ಸಾಧ್ಯತೆ ಇದೆ. ರಾಜಸ್ಥಾನದಲ್ಲೂ ಶುಭ್ರ ವಾತಾವರಣ ಇರಲಿದೆ. ಅಕ್ಟೋಬರ್ 8ರ ನಂತರ 10 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ದೆಹಲಿಯ ಜನರು ಎಂದಿನಂತೆ ಬಿಸಿಲು ಮತ್ತು ಶಾಖವನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನವು 35 ಡಿಗ್ರಿ ಇರಲಿದೆ. ಅದೇ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.