ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್‌:ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಡಿಕೆ ಶಿವಕುಮಾರ್  ವಿರುದ್ಧ ಸಿಬಿಐ ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದ ಕರ್ನಾಟಕದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಸಲ್ಲಿಸಿದೆ.

Oct 21, 2024 - 07:18
ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್‌:ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಡಿಕೆ ಶಿವಕುಮಾರ್  ವಿರುದ್ಧ ಸಿಬಿಐ ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದ ಕರ್ನಾಟಕದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಸಲ್ಲಿಸಿದೆ.ಬಿಜೆಪಿ ಶಾಸಕ ಯತ್ನಾಳ್‌ ಅರ್ಜಿ ವಿಚಾರಣೆ ವೇಳೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿತ್ತು. ಕೋರ್ಟ್ ಅಭಿಪ್ರಾಯ ಕೇಳಿದ್ದ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ (CBI) ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.

ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು. ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತ್ತು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.