ಬಡ ವಿದ್ಯಾರ್ಥಿಗಳಿಗೆ ಇನ್ನು ಉನ್ನತ ಶಿಕ್ಷಣಕ್ಕೆ ಸಾಲ ಪಡೆಯುವುದು ಬಹಳ ಸುಲಭ; ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ʼಪಿಎಂ ವಿದ್ಯಾಲಕ್ಷ್ಮಿʼ
ಪಿಎಂ ಕಿಸಾನ್ ಸಮ್ಮಾನ್, ಪಿಎಂ ಆವಾಸ್, ಪಿಎಂ ಸೂರ್ಯ ಘರ್ ಸೇರಿದಂತೆ ಹಲವಾರು ಯೋಜನೆಗಳನ್ನು ಪ್ರಾರಂಭಿಸಿರುವ ಕೇಂದ್ರ ಸರ್ಕಾರವು ಇದೀಗ ದೇಶದಲ್ಲಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಲಕ್ಷಾಂತರ ಬಡ ಕುಟುಂಬದ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕಾಗಿ ಇದೀಗ “ಪಿಎಂ ವಿದ್ಯಾಲಕ್ಷ್ಮಿʼ ಎನ್ನುವ ಸಾಲ ಯೋಜನೆಯನ್ನು ಪ್ರಾರಂಭಿಸುತ್ತಿದೆ.

ಮಂಗಳೂರು: ಪಿಎಂ ಕಿಸಾನ್ ಸಮ್ಮಾನ್, ಪಿಎಂ ಆವಾಸ್, ಪಿಎಂ ಸೂರ್ಯ ಘರ್ ಸೇರಿದಂತೆ ಹಲವಾರು ಯೋಜನೆಗಳನ್ನು ಪ್ರಾರಂಭಿಸಿರುವ ಕೇಂದ್ರ ಸರ್ಕಾರವು ಇದೀಗ ದೇಶದಲ್ಲಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಲಕ್ಷಾಂತರ ಬಡ ಕುಟುಂಬದ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕಾಗಿ ಇದೀಗ “ಪಿಎಂ ವಿದ್ಯಾಲಕ್ಷ್ಮಿʼ ಎನ್ನುವ ಸಾಲ ಯೋಜನೆಯನ್ನು ಪ್ರಾರಂಭಿಸುತ್ತಿದೆ.
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 7.5 ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗೆ ಖಾತರಿರಹಿತ ಶಿಕ್ಷಣ ಸಾಲ ನೀಡುವುದೇ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಾಗಿದೆ. ಬುಧವಾರ ನಡೆದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಪಿಎಂ ವಿದ್ಯಾಲಕ್ಷ್ಮಿ ಸಾಲ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್ ಅವರು, ಆರ್ಥಿಕ ಸಮಸ್ಯೆಗಳಿಂದಾಗಿ ದೇಶದ ಯುವ ಸಮುದಾಯ ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಯಿದೆ. ಇದನ್ನು ತಪ್ಪಿಸುವ ಮೂಲಕ ಬಡ ಕುಟುಂಬದ ವಿದ್ಯಾರ್ಥಿಗಳು ಕೂಡ ಉನ್ನತ ಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವುದಕ್ಕೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಈ ಯೋಜನೆಗೆ 2024ರಿಂದ 2031ರವರೆಗೆ ಒಟ್ಟು 3600 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.
ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಅಂದರೆ ಏನು?
ಈ ಯೋಜನೆಯಡಿ ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ 7.5 ಲಕ್ಷ ರೂ. ವರೆಗೆ ಬ್ಯಾಂಕ್ಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳಿಂದ ಕೊಲಾಟರಲ್ ರಹಿತ(ಯಾವುದೇ ಅಡಮಾನವಿಲ್ಲದೆ) ಸಾಲವನ್ನು ನೀಡಲಾಗುತ್ತದೆ. ಈ ಸಾಲದ ಶೇ.75ರಷ್ಟು ಮೊತ್ತಕ್ಕೆ ಸರ್ಕಾರವೇ ಬ್ಯಾಂಕ್ಗಳಿಗೆ ಖಾತರಿ ಕೊಡಲಿವೆ. ಅಂತೆಯೇ 8 ಲಕ್ಷ ರೂ.ಗಿಂತ ಅಧಿಕ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ.ವರೆಗೆ ಸಾಲ ನೀಡಲಿದ್ದು, ಅದಕ್ಕೆ ಶೇ.3ರಷ್ಟು ಬಡ್ಡಿ ವಿನಾಯಿತಿ ಕೂಡ ದೊರೆಯಲಿದೆ. ಈ ನಡುವೆ, ಕುಟುಂಬದ ಆದಾಯ 4.5 ಲಕ್ಷ ರೂ. ಇದ್ದರೆ ಶೇ.100ರಷ್ಟು ಬಡ್ಡಿ ವಿನಾಯಿತಿ ದೊರೆಯಲಿದೆ.
ವಿದ್ಯಾರ್ಥಿಗಳು ಅರ್ಜಿ ಹಾಕುವುದು ಹೇಗೆ?
ಈ ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷ ಇಲಾಖೆ ಏಕೀಕೃತ ಪೋರ್ಟಲ್ ಪರಿಚಯಿಸಲಿದೆ. 860 ಕ್ಯುಎಚ್ಇಐ ಸಂಸ್ಥೆಗಳ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಈ ಯೋಜನೆ ಲಾಭ ಪಡೆಯಲು ಅರ್ಹರಾಗಿದ್ದಾರೆ. ಈ ಯೋಜನೆಯ ಫಲಾನುಭವಿಗಳನ್ನು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನಲ್ಲಿ ರ್ಯಾಂಕ್ ಪಡೆದಿರುವ 100 ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರ ನಡೆಸುವ ಎಲ್ಲ ಉನ್ನ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು. ಪ್ರತಿವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ನೆರವು ಘೋಷಿಸಲಾಗುತ್ತದೆ.