ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಇರಬೇಕಿತ್ತು: ಡಿಕೆಶಿ

‘ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ,‌ ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು’

May 11, 2026 - 08:49
ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಇರಬೇಕಿತ್ತು: ಡಿಕೆಶಿ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಅವರು ಇರಬೇಕಿತ್ತು, ಯೋಜನೆಯ ಬಗ್ಗೆ ಬಹಳ ಕಾಳಜಿ ಹೊಂದಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಡಿ ಸುಧಾಕರ್ ಅವರ ನಿಧನದ ಬಗ್ಗೆ ಪ್ರತಿಕ್ರಿಯಿಸಿದ ವೇಳೆ ಅವರು ಮೇ 10ರಂದು ಈ ವಿಷಯ ಹೇಳಿದರು.

‘ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ,‌ ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು’ ಎಂದರು.

‘ಸುಧಾಕರ್‌ ಅವರು ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತ ಉಂಟಾಗಿದೆ’ ಎಂದು ಹೇಳಿದರು.

 

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.