ಪುತ್ತೂರಿನಲ್ಲಿ ಅಪಘಾತ ನಿವಾರಣೆಗೆ ಮೃತ್ಯುಂಜಯ ಸೂಕ್ತ ಜಪ ಮೇ 12ಕ್ಕೆ

ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ಬೆಳಿಗ್ಗೆ 9.30ರಿಂದ 11.30ರವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಅನೇಕ ವೈದಿಕರು ಭಾಗವಹಿಸಿ 1008 ಸಂಖ್ಯೆಯಲ್ಲಿ ಮೃತ್ಯುಂಜಯ ಸೂಕ್ತ ಜಪ ನೆರವೇರಿಸಲಿದ್ದಾರೆ

May 11, 2026 - 17:51
ಪುತ್ತೂರಿನಲ್ಲಿ ಅಪಘಾತ ನಿವಾರಣೆಗೆ ಮೃತ್ಯುಂಜಯ ಸೂಕ್ತ ಜಪ ಮೇ 12ಕ್ಕೆ

 ಪುತ್ತೂರಿನ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೈಕ್, ಕಾರು ಹಾಗೂ ಇತರ ವಾಹನ ಅಪಘಾತ ಪ್ರಕರಣಗಳ ನಿವಾರಣೆಗಾಗಿ ವಿಶೇಷ ಪೂಜೆ ಮತ್ತು ಮೃತ್ಯುಂಜಯ ಸೂಕ್ತ ಜಪ ಕಾರ್ಯಕ್ರಮವನ್ನು ಮೇ 12ರಂದು ಆಯೋಜಿಸಲಾಗಿದೆ.

ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ಬೆಳಿಗ್ಗೆ 9.30ರಿಂದ 11.30ರವರೆಗೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಅನೇಕ ವೈದಿಕರು ಭಾಗವಹಿಸಿ 1008 ಸಂಖ್ಯೆಯಲ್ಲಿ ಮೃತ್ಯುಂಜಯ ಸೂಕ್ತ ಜಪ ನೆರವೇರಿಸಲಿದ್ದಾರೆ.

ಜನರ ಹಿತದೃಷ್ಟಿಯಿಂದ ಸುಗಮ ಸಂಚಾರ ವ್ಯವಸ್ಥೆ ನಿರ್ಮಾಣವಾಗಲಿ ಹಾಗೂ ಮುಂದಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಿರಲಿ ಎಂಬ ಉದ್ದೇಶದಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತ ಜಾಗೃತಿ ಮೂಡಿಸುವ ಕಾರ್ಯವೂ ನಡೆಯಲಿದ್ದು, ಶ್ರೀ ಮಹಾಲಿಂಗೇಶ್ವರ ದೇವರ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.