ಅ.12ರಂದು ನಾಯಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

ನಾಯಬ್ ಸಿಂಗ್ ಹಯಾರ್ಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

Oct 9, 2024 - 04:23
ಅ.12ರಂದು ನಾಯಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

 ಹರ್ಯಾಣ ; ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್ ಹಯಾರ್ಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್​ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳುತ್ತಿದ್ದು, ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 12 ವಿಜಯದಶಮಿಯಂದು ನಾಯಬ್ ಸೈನಿ ಹಯಾರ್ಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಇದೀಗ ಎಲ್ಲರ ಕಣ್ಣು ಮುಂದಿನ ಸರ್ಕಾರ ರಚನೆಯತ್ತ ನೆಟ್ಟಿದೆ. ಮುಖ್ಯಮಂತ್ರಿ ನೈಬ್ ಸೈನಿ ಜೊತೆಗೆ ಒಬ್ಬ ಅಥವಾ ಇಬ್ಬರು ಉಪಮುಖ್ಯಮಂತ್ರಿಗಳೂ ಇರಬಹುದು ಎಂದು ಹೇಳಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.ಇದಕ್ಕೂ ಮೊದಲು, ಬಿಜೆಪಿಯ ಕೇಂದ್ರ ನಾಯಕತ್ವವು ಶಾಸಕರೊಂದಿಗೆ ಸಭೆ ನಡೆಸಲು ಹರ್ಯಾಣಕ್ಕೆ ವೀಕ್ಷಕರನ್ನು ಕಳುಹಿಸುತ್ತದೆ, ಇದರಿಂದಾಗಿ ಪಕ್ಷವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಸರಿಯಾದ ಅಭ್ಯರ್ಥಿಯನ್ನು ಅಧಿಕೃತವಾಗಿ ಆಯ್ಕೆ ಮಾಡುತ್ತದೆ. ಅದರೊಂದಿಗೆ ಸಂಪುಟ ಸಚಿವರ ಪಟ್ಟಿಯನ್ನು ತಯಾರಿಸಲಾಗುವುದು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆದರೆ, ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಜನರು ಮತ ಚಲಾಯಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ 61.38 ಶೇಕಡಾ ಮತದಾನವಾಗಿದೆ, ನಂತರ ಸೆಪ್ಟೆಂಬರ್ 25 ರಂದು ಎರಡನೇ ಹಂತದಲ್ಲಿ 57.31 ಶೇಕಡಾ ಮತ್ತು ಅಕ್ಟೋಬರ್ 1ರಂದು ಅಂತಿಮ ಹಂತದಲ್ಲಿ 65.48ರಷ್ಟು ಮತದಾನವಾಗಿದೆ.10 ವರ್ಷಗಳ ಬಳಿಕ, 2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಇದು ಮೊದಲನೆಯ ಚುನಾವಣೆಯಾಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಯ ಬಳಿಕ ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಂಡಿದೆ.