ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ, ಗ್ಯಾರಂಟಿ ಕಾಂಗ್ರೆಸ್ ಸರಕಾರದ ಹೆಮ್ಮೆಯ ಯೋಜನೆಗಳು, ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಕೆ ಎಂಬ ಭರವಸೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jun 14, 2026 - 17:02
ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂ. 14: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ "ಗೃಹಲಕ್ಷ್ಮಿ" ಮತ್ತು "ಗೃಹಜ್ಯೋತಿ" ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಭಾನುವಾರ ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿರುವ ಸಿಎಂ ಕಚೇರಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಚಿವರಾದ ಜಾರ್ಜ್ ಫರ್ನಾಂಡಿಸ್‌, ಡಾ.ಯತೀಂದ್ರ ಸಿದ್ದರಾಮಯ್ಯ ಅವರೂ ಭೇಟಿ ಮಾಡಿದ್ದರು. ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರು ಸಹ ಸಿಎಂ ಭೇಟಿ ಮಾಡಿ ಅಭಿನಂದಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.