ಪ್ರಧಾನಿ ಮೋದಿ ಹೇಳಿಕೆ ನಾಚಿಕೆಗೇಡು: ಹರೀಶ್ ಕುಮಾರ್

ದೇಶಾದ್ಯಂತ ವಾಣಿಜ್ಯ ಗ್ಯಾಸ್‌ಗಳ ದರ 993 ರೂ. ಏರಿಕೆ ಮಾಡಲಾಗಿದೆ. ದಿನಬಳಕೆ ವಸ್ತುಗಳು ದರ ಗಗನಕ್ಕೇರಿದೆ. ಒಂದೆಡೆ ಆತ್ಮ ನಿರ್ಭರ್ ಭಾರತ್, ವಾಹನ ಕೈಗಾರಿಕೆ, ಉದ್ಯಮ ವಲಯಕ್ಕೆ ಪ್ರೋತ್ಸಾಹಿಸಿ ಎಂದು ಪ್ರಧಾನಿ ಹೇಳುತ್ತಿದ್ದಾರೆ.

May 11, 2026 - 21:40
ಪ್ರಧಾನಿ ಮೋದಿ ಹೇಳಿಕೆ ನಾಚಿಕೆಗೇಡು: ಹರೀಶ್ ಕುಮಾರ್

ಮಂಗಳೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಒಂದು ವರ್ಷ ಚಿನ್ನ ಖರೀದಿ ಮಾಡಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಕರೆ ನೀಡಿರುವುದು ನಾಚಿಕೆಗೇಡು. ಇದು ಕುಣಿಯಲಾಗದವ ಅಂಗಣ ಡೊಂಕು ಹೇಳಿದಂತಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ದೇಶಾದ್ಯಂತ ವಾಣಿಜ್ಯ ಗ್ಯಾಸ್‌ಗಳ ದರ 993 ರೂ. ಏರಿಕೆ ಮಾಡಲಾಗಿದೆ. ದಿನಬಳಕೆ ವಸ್ತುಗಳು ದರ ಗಗನಕ್ಕೇರಿದೆ. ಒಂದೆಡೆ ಆತ್ಮ ನಿರ್ಭರ್ ಭಾರತ್, ವಾಹನ ಕೈಗಾರಿಕೆ, ಉದ್ಯಮ ವಲಯಕ್ಕೆ ಪ್ರೋತ್ಸಾಹಿಸಿ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಇನ್ನೊಂದೆಡೆ ವಾಹನಗಳನ್ನು ಮಿತವಾಗಿ ಬಳಸಿ ಹೇಳುತ್ತಿದ್ದಾರೆ. ಚಿನ್ನ ಖರೀದಿ ಮಾಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಸ್ವರ್ಣೋದ್ಯಮಕ್ಕೆ ದೊಡ್ಡ ಹೊಡೆತ ಬೀಳುವಂತೆ ಮಾಡುತ್ತಿದ್ದಾರೆ. ಈ ನಷ್ಟಕ್ಕೆ ಯಾರು ಹೊಣೆ? ಎಂದು ಅವರು ಪ್ರಶ್ನಿಸಿದ್ದಾರೆ.

ದೇಶದ ಪ್ರಧಾನಿಯಾಗಿ ಈ ರೀತಿಯ ಹೇಳಿಕೆ ಶೋಭೆಯಲ್ಲ, ಬಾಲಿಶತನದ್ದು. ದೇಶವನ್ನು ಈಗಾಗಲೇ ಸಾಲದ ಕೂಪಕ್ಕೆ ತಳ್ಳಲಾಗಿದೆ, ಈಗ ಉದ್ಯಮ ವಲಯವನ್ನು ನಷ್ಟ ಮಾಡಿ ಮತ್ತಷ್ಟು ಬರೆ ಎಳೆಯುವ ಪ್ರಯತ್ನವಾಗಿದೆ. ಆಡಳಿತ ನಡೆಸಲು ಅಸಮರ್ಥರಾದವರು ಮಾತ್ರ ಈ ರೀತಿ ಹೇಳಿಕೆ ನೀಡಲು ಸಾಧ್ಯ ಎಂದು ಹರೀಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.