ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ

ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ.

Mar 20, 2026 - 16:04
ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ

ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಡೀಸಲ್ ಬೆಲೆಯಲ್ಲೂ ಏರಿಕೆ ಆಗಿಲ್ಲ.


ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ ಮಾಮೂಲಿಯ ಪೆಟ್ರೋಲ್​ಗಿಂತ ತುಸು ಹೆಚ್ಚಿನದ್ದಿರುತ್ತದೆ. ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್, ಎಚ್​ಪಿಸಿಎಲ್ ಈ ಬೆಲೆ ಏರಿಕೆ ಮಾಡಿವೆ.  ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.96 ರೂ ಇದೆ. ಡೀಸಲ್ ಬೆಲೆ 90.99 ರೂ ಇದೆ. ಈ ಬೆಲೆಗಳಲ್ಲಿ ಬದಲಾವಣೆ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್​ನ ಬೆಲೆ 2.09ರೂನಿಂದ 2.35 ರೂವರೆಗೆ ಏರಿಕೆ ಆಗಿದೆ. ಐಒಸಿಎಲ್​ನ ಎಕ್ಸ್​ಪಿ95, ಎಚ್​ಪಿಸಿಎಲ್​ನ ಪವರ್ ಹಾಗು ಬಿಪಿಸಿಎಲ್​ನ ಸ್ಪೀಡ್ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ ಆಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.