ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ?

ಖ್ಯಾತ ಗಾಯಕಿ ಮಂಗ್ಲಿ ಅವರ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

Apr 11, 2026 - 16:31
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ?
Mangli

ಗಾಯಕಿ ಮಂಗ್ಲಿ ಅವರ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲ ಸುಬ್ಬರಾವ್ ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಗಾಯಕಿ ಮತ್ತು ಆಕೆಯ ಸಹೋದರ ಶಿವ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೈಕ್ರೋ ಫೈನಾನ್ಸ್‌ ಹೆಸರಿನಲ್ಲಿ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರ ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿತ್ತು. ಅವರು ಸುಮಾರು 100 ಜನರಿಂದ ಭಾರೀ ಹಣ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ಮಂಗ್ಲಿ ಕಡೆಯಿಂದ ಸುಮಾರು 10 ಕೋಟಿ ರೂಪಾಯಿ ಮೋಸ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಅನೇಕರು ಆರೋಪಿಸಿದ್ದಾರೆ. ಸಂತ್ರಸ್ತರು ವಕೀಲ ಸುಬ್ಬರಾವ್ ಅವರನ್ನ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಕೂಡ ವಕೀಲ ಸುಬ್ಬರಾವ್ ದೂರು ನೀಡಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.