12 ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಸಿಎಂ

ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು ಎಂದು ಹೇಳಿರುವ ಮುಖ್ಯಮಂತ್ರಿ, ಹೊಸದಾಗಿ ಅಳವಡಿಸಲಾದ ಅಂದರೆ ಕೇಸರಿ  ಶಾಲಿನಂತಹ ವಸ್ತ್ರಧಾರಣೆಗೆ ಅವಕಾಶ ಇಲ್ಲ ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ

May 14, 2026 - 16:50
12 ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಸಿಎಂ

ಮೈಸೂರು, ಮೇ 14: ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಅವರು ಗುರುವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಪ್ರಧಾನಿಗಳ ಹೇಳಿಕೆ ಸರಿಯಿಲ್ಲ

ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿ ಅವರು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.

ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ

ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.