ಈ ದಿನದ ರಾಶಿ ಭವಿಷ್ಯ

ಈ ದಿನದ ರಾಶಿ ಭವಿಷ್ಯ

Dec 19, 2024 - 05:25
ಈ ದಿನದ ರಾಶಿ ಭವಿಷ್ಯ
ರಾಶಿ ಭವಿಷ್ಯ

ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ 1

1.ಮೇಷ:
ಈ ದಿನ ಬಹುಪಾಲು ಶುಭಫಲಗಳು. ಉದ್ಯೋಗದಲ್ಲಿ ವಿಶೇಷ ಸಾಧನೆಯ ಕೀರ್ತಿ ನಿಮ್ಮದಾಗಲಿದೆ. ಉದ್ಯೋಗ ಬದಲಾವಣೆಯ ಯೋಚನೆ ಅನವಶ್ಯ. ಉದ್ಯಮದಲ್ಲಿ ಉತ್ಪಾದನೆಯ ಪ್ರಮಾಣ ಕುಗ್ಗದು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ. ಗಣೇಶ ಪಂಚರತ್ನ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

2. ವೃಷಭ:
ಸಾಕಷ್ಟು ವಿಮರ್ಶಿಸಿ ಮುನ್ನಡೆಯಿರಿ. ಉದ್ಯೋಗದಲ್ಲಿ ತೃಪ್ತಿ, ಸಮಾಧಾನ.  ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳುಸುವ ಪ್ರಯತ್ನ. ವಿತ್ತಸಂಸ್ಥೆಯಿಂದ ಧನಸಹಾಯ ಸಕಾಲಕ್ಕೆ ಲಭ್ಯ. ಸಂಸಾರದಲ್ಲಿ ಎಲ್ಲರಿಗೂ ಶಾಂತಿ, ಸಮಾಧಾನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ನವಗ್ರಹ ಕವಚ ಓದಿ.

3.ಮಿಥುನ:
ಉದ್ಯೋಗದಲ್ಲಿ ಸಹಜ ಪರಿಸ್ಥಿತಿ.  ಸೇವಾ ಹಿರಿತನ, ಅನುಭವಕ್ಕೆ ಮಾನ್ಯತೆ. ಸ್ವಂತ ಉದ್ಯಮ ಆರ್ಥಿಕ ಮುಗ್ಗಟ್ಟು ಬಹುತೇಕ ಪರಿಹಾರ. ಮಹಿಳೆಯರ ಸ್ವಾವಲಂಬನೆ ಸಾಧನೆ ಪ್ರಗತಿಯಲ್ಲಿ. ಅನವಶ್ಯ ಚರ್ಚೆಯಲ್ಲಿ ಮುಳುಗಬೇಡಿ‌. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಅನ್ನಪೂರ್ಣಾ ಸ್ತೋತ್ರ ಓದಿ.

4.ಕರ್ಕಾಟಕ:
ಅನಪೇಕ್ಷಿತ ವಿದ್ಯಮಾನಗಳಿಂದ ಕಂಗೆಡದಿರಿ. ಉದ್ಯೋಗ ಸ್ಥಾನದಲ್ಲಿ ಸಹಜಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ನೆಂಟಸ್ತಿಕೆ ಹುಡುಕುತ್ತಿರುವವರಿಗೆ ಶುಭಸೂಚನೆ. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ. ಗಣಪತಿ ಅಥರ್ವಶೀರ್ಷ, ಮಹಿಷಮರ್ದಿನಿ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

5.ಸಿಂಹ:
ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪರವೂರಿನಲ್ಲಿರುವ ಬಂಧುಗಳ ಅನಿರೀಕ್ಷಿತ ಆಗಮನ. ಗೃಹೋತ್ಪನ್ನ ಖಾದ್ಯಪದಾರ್ಥಗಳಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಸಂಕಷ್ಟನಾಶನ ಗಣೇಶ ಸ್ತೋತ್ರ, ನರಸಿಂಹ ಕವಚ, ಗುರುಸ್ತೋತ್ರ ಓದಿ.

6.ಕನ್ಯಾ:
ಉದ್ಯೋಗದಲ್ಲಿ ಸ್ಥಿರವಾಗಿ ನಿಲ್ಲುವ ಪ್ರಯತ್ನ. ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ಉಪಕರಣ ವ್ಯಾಪಾರಿಗಳಿಗೆ  ಉತ್ತಮ ಆದಾಯ. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ. ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. 
ಗಣೇಶ ಅಷ್ಟಕ, ದಕ್ಷಿಣಾಮೂರ್ತಿ  ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

7.ತುಲಾ:
ಅಳುಕದೆ ಮುಂದುವರಿಯಿರಿ. ಪಂಚಮ ಶನಿಯ ಕಾಟವಿದ್ದರೂ ಉದ್ಯೋಗದಲ್ಲಿ ಒಳ್ಳೆಯ ಹೆಸರು  ಸಾಧ್ಯ.  ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ. ಗಣೇಶ ಕವಚ, ಚಂದ್ರಶೇಖರ ಅಷ್ಟಕ, ಶನಿಸ್ತೋತ್ರ ಓದಿ.

8.ವೃಶ್ಚಿಕ:
ಉದ್ಯೋಗದಲ್ಲಿ ಉನ್ನತಿಯ ಸೂಚನೆ. ಸ್ವಂತ ಉದ್ಯಮದ ಬೆಳವಣಿಗೆ  ತೃಪ್ತಿಕರ. ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಗಣಪತಿ ಅಥರ್ವಶೀರ್ಷ, ದೇವೀಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.

9.ಧನು:
ಹಿತಶತ್ರುಗಳ ಬಾಧೆಯಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಸ್ವಂತ ಉದ್ಯಮ  ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ‌ ಪ್ರಾಪ್ತಿ.ಕೃಷಿ ಕಾರ್ಯದಲ್ಲಿ ಪಾಲುಗೊಳ್ಳುವ ಪ್ರಯತ್ನದಲ್ಲಿ ಮುನ್ನಡೆ. ಗಣೇಶ ಪಂಚರತ್ನ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

10.ಮಕರ:
ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ಅಧ್ಯಯನಾಸಕ್ತಿ ಸುಧಾರಣೆ. ಸಂಸಾರದಲ್ಲಿ ಎಲ್ಲರಿಗೂ ನೆಮ್ಮದಿಯ ಅನುಭವ. ಗಣಢಶ ಕವಚ, ವಿಷ್ಣು ಸಹಸ್ರನಾಮ, ಶನಿಸ್ತೋತ್ರ ಓದಿ.

11.ಕುಂಭ:
ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಸ್ತೋತ್ರ, ಆಂಜನೇಯ ಸ್ತೋತ್ರ ಓದಿ.

12. ಮೀನ:
ಸ್ಥಗಿತಗೊಂಡಿದ್ದ  ಕಾರ್ಯಗಳಿಗೆ ಚಾಲನೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಇಲಾಖೆಗಳಿಂದ  ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ. ಗಣೇಶ ಕವಚ, ದೇವೀಸ್ತೋತ್ರ, ಶನಿಸ್ತೋತ್ರ ಓದಿ.