ವಿಜಯೇಂದ್ರ ಇರೋವರೆಗೆ ಪಕ್ಷದ ಕಾರ್ಯಕ್ರಮಕ್ಕೆ ಹೋಗಲ್ಲ:ರಮೇಶ್ ಜಾರಕಿಹೊಳಿ ಅಸಮಧಾನ
ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಇತ್ತ ಪಕ್ಷದ ನಾಯಕರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಸೆಣಸಾಟ ನಡೆಸುತ್ತಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಇತ್ತ ಪಕ್ಷದ ನಾಯಕರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಸೆಣಸಾಟ ನಡೆಸುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ನಾಯಕರ ನಡುವಿನ ಅಸಮಧಾನ ಈಗಲೂ ಮುಂದುವರೆದಿದೆ. ಹೌದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಪಕ್ಷದ ಅಧ್ಯಕ್ಷನಾಗಿರುವವರೆಗೂ ನಾನು ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ ಎಂದು ತಮ್ಮ ಅಸಮಾಧಾನವನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.
ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ
ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರದಲ್ಲಿನ ಉಪ ಚುನಾವಣೆ ಕುರಿತು ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ``ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ವಿಜಯೇಂದ್ರ ಅಧ್ಯಕ್ಷ ಸ್ಥಾನದಲ್ಲಿ ಇರುವವರೆಗೂ ನಾನು ಪ್ರಚಾರಕ್ಕೆ ಹೋಗುವುದಿಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ.
ಬಿಎಸ್‌ವೈ ಸಿಎಂ ಆಗಲು ಯೋಗೇಶ್ವರ್ ಕಾರಣ?
ಬಿಎಸ್ ಯಡಿಯೂರಪ್ಪ ಸಿಎಂ ಆಗಲು ಯೋಗೇಶ್ವರ ಕಾರಣ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ ಹಾಗೂ ನಾನು, ಎನ್ ಆರ್ ಸಂತೋಷ ಮೂರು ಜನ ಪ್ರಂಟ್ ಲೈನ್‌ನಲ್ಲಿ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಇದ್ದಾಗ ಸಿದ್ದರಾಮಯ್ಯನವರ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೇವು. ಆದರೆ ಈಗ ಕೆಲವೊಂದು ವಿಷಯಗಳನ್ನು ಈಗ ಬಹಿರಂಗ ಪಡಿಸಲ್ಲ. ಉಪ ಚುನಾವಣೆ ಪಕ್ಷಕ್ಕೆ ಮುಜುಗರ ಆಗೋದು ಬೇಡ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ಅವರು ಮಾತುಗಳಿಗೆ ಬ್ರೇಕ್ ಹಾಕಿದರು.