ಈ ವರ್ಷದ 2 ಪಿಯುಸಿ ಪರೀಕ್ಷೆಯಲ್ಲೂ ವೆಬ್ ಕಾಸ್ಟಿಂಗ್

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) 2025ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ತಡೆಗಟ್ಟಲು ವೆಬ್‌ಕಾಸ್ಟಿಂಗ್​ಗೆ ಮುಂದಾಗುತ್ತಿದೆ.

Oct 30, 2024 - 10:03
Feb 5, 2026 - 18:39
ಈ ವರ್ಷದ 2 ಪಿಯುಸಿ ಪರೀಕ್ಷೆಯಲ್ಲೂ ವೆಬ್ ಕಾಸ್ಟಿಂಗ್
Webcasting in this year 2 PUC exam also

 ಬೆಂಗಳೂರು: ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವೆಬ್ ಕಾಸ್ಟಿಂಗ್  ಮೊರೆ ಹೋಗಿತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (ಕೆಎಸ್‌ಇಎಬಿ) ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೂಡ ವೆಬ್‌ಕಾಸ್ಟಿಂಗ್​ಗೆ ಮುಂದಾಗಿದೆ.ಸಾಮೂಹಿಕ ನಕಲು ತಡೆಯಲು ಮತ್ತು ಪಾರದರ್ಶಕತೆ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟನಲ್ಲಿ ಶಿಕ್ಷಣ ಇಲಾಖೆ ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್​​ ಪರಿಚಯಿಸಲಾಗಿತ್ತು. ಹಾಗಾಗಿ ಮಾರ್ಚ್-ಏಪ್ರಿಲ್ 2025 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೂಡ ಅದೇ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ.

2024ರ ಸಾಲಿನ 2 ಮತ್ತು 3 ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ನಾವು ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿರುವ ಕಾಲೇಜುಗಳನ್ನು ಗುರುತಿಸಿದ್ದೇವೆ ಮತ್ತು ಈಗಾಗಲೇ ವೆಬ್ ಕಾಸ್ಟಿಂಗ್​ ಪರೀಕ್ಷೆ ಯಶಸ್ವಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ಆಗಿದೆ.ಇನ್ನು 2025ರ ಸಾಲಿನ ಬೋರ್ಡ್ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾದ ಕಾಲೇಜುಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪತ್ರ ಬರೆದಿದ್ದು, ಸಿಸಿಟಿವಿ ಕ್ಯಾಮೆರಾಗಳ ಐಪಿ ಸಂಖ್ಯೆಯನ್ನು ಆಯಾ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರಿಗೆ ನೀಡುವಂತೆ ತಿಳಿಸಲಾಗಿದೆ. ಆ ಮೂಲಕ ಉಪ ನಿರ್ದೇಶಕರು ಮತ್ತು ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಪರೀಕ್ಷೆಯ ನೇರ ದೃಶ್ಯಾವಳಿಗಳನ್ನು ನೋಡಬಹುದಾಗಿದ್ದು, ಮತ್ತು ನಕಲು ತಡೆಯಲು ಸಹಾಯವಾಗಿದೆ ಎಂದು ಹೇಳಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.