3 ತಿಂಗಳ ಒಳಗೆ ಒಳಮೀಸಲಾತಿ ಜಾರಿಗೆ ಕ್ರಮ: ಸಿದ್ದರಾಮಯ್ಯ

ಒಳಮೀಸಲಾತಿ  ನೀಡಲು ಕ್ಯಾಬಿನೆಟ್‌ನಲ್ಲಿ  ಒಮ್ಮತದ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.

Oct 29, 2024 - 15:53
3 ತಿಂಗಳ ಒಳಗೆ ಒಳಮೀಸಲಾತಿ ಜಾರಿಗೆ ಕ್ರಮ: ಸಿದ್ದರಾಮಯ್ಯ
Siddaramaiah

ಬೆಂಗಳೂರು: ಒಳಮೀಸಲಾತಿ  ನೀಡಲು ಕ್ಯಾಬಿನೆಟ್‌ನಲ್ಲಿ  ಒಮ್ಮತದ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.ಒಳಮೀಸಲಾತಿ ಜಾರಿ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಒಳಮೀಸಲಾತಿ ಬಗ್ಗೆ ಸೋಮವಾರ ಕ್ಯಾಬಿನೆಟ್‌ನಲ್ಲಿ ತರ‍್ಮಾನ ಆಗಿದೆ. ಸೋಮವಾರದ ಕ್ಯಾಬಿನೆಟ್‌ನಲ್ಲಿ ಒಳಮೀಸಲಾತಿ ಜಾರಿಗೆ ಒಪ್ಪಲಾಗಿದೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡುತ್ತೇವೆ. ಆಯೋಗವೂ 3 ತಿಂಗಳ ಒಳಗೆ ವರದಿ ಕೊಡಲಿದೆ ಎಂದರು. ಮೀಸಲಾತಿ ನೀಡಲು ಅಂಕಿಅಂಶಗಳು ಇಲ್ಲ ಅನ್ನೋದು ಕೆಲವರ ಅಭಿಪ್ರಾಯ. ಈ ಕಾರಣಕ್ಕೆ ಅಂಕಿಅಂಶಗಳ ಸಂಗ್ರಹಕ್ಕೆ ಆಯೋಗ ರಚನೆ ಮಾಡ್ತಿದ್ದೇವೆ. ಕೂಡಲೇ ಆಯೋಗ ರಚನೆ ಮಾಡುತ್ತೇವೆ. ಅಲ್ಲಿವರೆಗೂ ಯಾವುದೇ ನೇಮಕಾತಿ ಪ್ರಕ್ರಿಯೆ ಮಾಡೋದಿಲ್ಲ. ಈಗ ಯಾವುದು ನೊಟೀಫಿಕೇಶನ್ ಆಗಿದೆಯೋ ಅದನ್ನು ಹೊರತುಪಡಿಸಿ ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡಲ್ಲ. ಜಡ್ಜ್ ಯಾರು ಅಂತ ಇವತ್ತೇ ತರ‍್ಮಾನ ಮಾಡುತ್ತೇವೆ. 3 ತಿಂಗಳಲ್ಲಿ ವರದಿ ಬರಲಿದ್ದು, ಅಲ್ಲಿಯವರೆಗೂ ಹೊಸ ನೇಮಕಾತಿ ಪ್ರಕ್ರಿಯೆ ಶುರು ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು. 

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.