Toxic: ಟಾಕ್ಸಿಕ್ ಸಿನಿಮಾದ 'ಮನಮೋಹಕ' ಸಾಂಗ್ ರಿಲೀಸ್

Toxic: ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದ ಎರಡನೇ ಸಾಂಗ್ 'ಮನಮೋಹಕ ರಿಲೀಸ್ ಆಗಿದೆ.

Jul 21, 2026 - 13:05
Toxic: ಟಾಕ್ಸಿಕ್ ಸಿನಿಮಾದ 'ಮನಮೋಹಕ' ಸಾಂಗ್ ರಿಲೀಸ್

ರಾಕಿಂಗ್ ಸ್ಟಾರ್ ಯಶ್ (Yash) ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದ್ದು, ಟಾಕ್ಸಿಕ್ (Toxic) ಸಿನಿಮಾದ ಎರಡನೇ ಸಾಂಗ್ 'ಮನಮೋಹಕ..' ಇಂದು (ಮಂಗಳವಾರ) ರಿಲೀಸ್ ಆಗಿದ್ದು, ಇಂಟರ್‌ನೆಟ್‌ನಲ್ಲಿ ಸಖತ್ ಹಲ್‌ಚಲ್‌ ಸೃಷ್ಟಿಸುತ್ತಿದ್ದು, ಭಾರೀ ಸಂಖ್ಯೆಯಲ್ಲಿ ವೀಕ್ಷಣೆ ಪಡೆದುಕೊಳ್ಳುತ್ತಿದೆ. 

ಈ ಹಾಡಿನಲ್ಲಿ ಯಶ್ ಜೊತೆ ಬಾಲಿವುಡ್ ನಟಿ ತಾರಾ ಸುತಾರಿಯಾ ಮತ್ತು ನಯನತಾರಾ ಕಾಣಿಸಿಕೊಂಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದು, ಸಿದ್ಧಾರ್ಥ್ ಬಸ್ರೂರು ಗಾಯನವಿದೆ. ತನಿಷ್ಕ್ ಬಾಗ್ಚಿ, ಫಹೀಮ್ ಅಬ್ದುಲ್ಲಾ ಹಾಗೂ ಅರ್ಸ್ಲಾನ್ ನಿಜಾಮಿ ಸಂಗೀತ ಸಂಯೋಜಿಸಿದ್ದಾರೆ. ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಿದೆ.

ಈಗಾಗಲೇ ಮೊದಲ ಸಾಂಗ್ 'ತಬಾಹಿ' ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿತ್ತು. 'ಟಾಕ್ಸಿಕ್' ಸಿನಿಮಾವು ಆಗಸ್ಟ್ 26 ರಂದು  ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

 'ಟಾಕ್ಸಿಕ್' ಬಿಗ್ ಬಜೆಟ್ ಚಿತ್ರವಾಗಿದ್ದು, ಗೀತು ಮೋಹನ್‌ದಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.