ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಚರಣೆ

Akshaya College: ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ಈಚೆಗೆ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ದಿನಾಚರಣೆಯನ್ನು ಆಚರಿಸಲಾಯಿತು.

Sep 30, 2026 - 15:12
ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಚರಣೆ

ಪುತ್ತೂರು: ಇಲ್ಲಿನ ಅಕ್ಷಯ ಕಾಲೇಜಿನಲ್ಲಿ ಈಚೆಗೆ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಿವೃತ್ತ ಶಿಕ್ಷಕ ನಾರಾಯಣ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ 'ಬೆಸ್ಟ್ ಎನ್ಎಸ್ಎಸ್ ವಾಲಂಟೀರ್ಸ್ ಅವಾರ್ಡ್'ನ್ನು ತೃತೀಯ ಬಿಸಿಎ ವಿದ್ಯಾರ್ಥಿ ಸುಹಾಸ್ ಹಾಗೂ ತೃತೀಯ ಬಿಎ ವಿದ್ಯಾರ್ಥಿನಿ ಕೋಮಲಾಕ್ಷಿಗೆ ಪ್ರದಾನ ಮಾಡಲಾಯಿತು. ಹಾಗೆಯೇ ವಿವಿಧ ಸ್ಪರ್ಧೆಗಳಲ್ಲಿ ಜಯಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಐಕ್ಯೂಎಸಿ ಕೋಆರ್ಡಿನೇಟರ್, ಎನ್ಎಸ್ಎಸ್ ಯೋಜನಾಧಿಕಾರಿಗಳು ಮತ್ತುಎನ್ಎಸ್ಎಸ್ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.