Akshaya College: ಅಕ್ಷಯ ಕಾಲೇಜಿನಲ್ಲಿ ಪಿಜ್ಜಾ ತಯಾರಿಕೆ ಕಾರ್ಯಾಗಾರ ಆಯೋಜನೆ
Akshaya College: ಅಕ್ಷಯ ಕಾಲೇಜಿನಲ್ಲಿ ಈಚೆಗೆ ಪಿಜ್ಜಾ ತಯಾರಿಕೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಪುತ್ತೂರು: ಇಲ್ಲಿನ ಅಕ್ಷಯ ಕಾಲೇಜಿನ 'ಕಾಯು ಅಸೋಸಿಯೇಷನ್' ವತಿಯಿಂದ, ಈಚೆಗೆ 'ಪಿಜ್ಜೇರಿಯಾ' - ಪಿಜ್ಜಾ ತಯಾರಿಕೆಯ ಪ್ರಾಯೋಗಿಕ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಬಿಹೆಚ್ಎಸ್ ವಿಭಾಗದ ಮುಖ್ಯಸ್ಥ ಅವಿನಾಶ್ ಕೆ.ಆರ್ ನೇತೃತ್ವದಲ್ಲಿ ಈ ಕಾರ್ಯಾಗಾರ ನಡೆಯಿತು. ಗಯಾ ಕೆಫೆ & ಆಲುಪ ಸಂಸ್ಥೆಯ ಸ್ಥಾಪಕ ಪ್ರಜ್ವಲ್ ಆಲ್ಬರ್ಟ್ ಡಿಸೋಜಾ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪಿಜ್ಜಾ ಸಿದ್ಧಪಡಿಸಲು ಬಳಸುವ ಪದಾರ್ಥಗಳು, ತಯಾರಿಕೆಯ ವಿವಿಧ ಹಂತಗಳು ಹಾಗೂ ಪಾಕಕಲೆಯ ತಂತ್ರಗಳನ್ನು ಪ್ರಾಯೋಗಿಕವಾಗಿ ಹೇಳಿಕೊಟ್ಟರು.

ಇದೇ ವೇಳೆ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲ್ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆತಿಥ್ಯ & ಆಹಾರ ಕ್ಷೇತ್ರದಲ್ಲಿರುವ ವ್ಯಾಪಕ ವೃತ್ತಿ ಅವಕಾಶಗಳ ಕುರಿತು ವಿವರಿಸಿದರು. ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ಕೇವಲ ಪಠ್ಯದ ಜ್ಞಾನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಕೌಶಲ್ಯ, ಉದ್ಯಮ ಕ್ಷೇತ್ರದ ಅನುಭವ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ವೃತ್ತಿಪರ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.