Akshaya College: ಗ್ರಾಹಕ ಹಕ್ಕುಗಳ ರಕ್ಷಣೆ ಕುರಿತು ವಿಶೇಷ ಉಪನ್ಯಾಸ
Akshaya College: ಮಾನವ ಹಕ್ಕುಗಳ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ 'ಗ್ರಾಹಕ ಹಕ್ಕುಗಳ ರಕ್ಷಣೆ' ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪುತ್ತೂರು: ಗ್ರಾಹಕರು ತಮ್ಮ ದೈನಂದಿನ ಜೀವನದಲ್ಲಿ ಹಲವಾರು ವಸ್ತುಗಳನ್ನು ಖರೀದಿಸುವ ಸಂದರ್ಭದಲ್ಲಿ, ಅವುಗಳ ಕಳಪೆ ಗುಣಮಟ್ಟದಿಂದ ಮೋಸ ಹೋಗಬಹುದು. ಸಮರ್ಪಕವಾದ ಕಾನೂನಿನ ಅರಿವಿಲ್ಲದೇ ನಷ್ಟವನ್ನು ಅನುಭವಿಸಬಹುದು. ಈ ಹಿನ್ನೆಲೆ, ಗ್ರಾಹಕರ ರಕ್ಷಣಾ ಕಾಯ್ದೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅಕ್ಷಯ ಕಾಲೇಜಿನ ಪ್ರಾಂಶುಪಾಲ ಕೆ.ಪಕ್ಕಳ ತಿಳಿಸಿದರು.
ಕಾಲೇಜಿನ ಸಭಾಂಗಣದಲ್ಲಿ ಮಾನವ ಹಕ್ಕುಗಳ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ 'ಗ್ರಾಹಕ ಹಕ್ಕುಗಳ ರಕ್ಷಣೆ' ಎಂಬ ವಿಷಯದ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ಚಿದಾನಂದ ಬೈಲಾಡಿ ಭಾಗವಹಿಸಿದ್ದರು. ಕಲಬೆರಕೆ, ನಕಲಿ ವಸ್ತುಗಳಿಂದ ಹೇಗೆ ರಕ್ಷಣೆ ಪಡೆಯಬೇಕು ಮತ್ತು ಗ್ರಾಹಕ ನ್ಯಾಯಾಲಯದಲ್ಲಿ ದೂರು ಸಲ್ಲಿಸುವ ವಿಧಾನದ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಕಲಾ ವಿಭಾಗದ ಮುಖ್ಯಸ್ಥ ಅಶೋಕ ರೈ, ಐಕ್ಯೂಎಸಿ ಸಂಯೋಜಕಿ ರಶ್ಮಿ.ಕೆ, ಮಾನವ ಹಕ್ಕುಗಳ ಕ್ಲಬ್‌ನ ಸಂಯೋಜಕಿ ಹರ್ಷಿತ ಎನ್.ಎಂ ಭಾಗವಹಿಸಿದ್ದರು.
ತೃತೀಯ ಪದವಿ ವಿದ್ಯಾರ್ಥಿನಿ ಕೋಮಲಾಕ್ಷಿ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಗಂಧರ್ವ ವಂದಿಸಿದರು. ದ್ವಿತೀಯ ಪದವಿ ವಿದ್ಯಾರ್ಥಿನಿ ಧನ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.