Akshaya Degree College: ಅಕ್ಷಯ ಪದವಿ ಕಾಲೇಜಿನಲ್ಲಿ 'ಫ್ರೆಶರ್ಸ್ ಡೇ' ಆಚರಣೆ

Akshaya Degree College: ಈಚೆಗೆ ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 'ಆಹ್ವಾನಂ-2026' ಫ್ರೆಶರ್ಸ್ ಡೇ ಕಾರ್ಯಕ್ರಮ ಆಯೋಜಿಸಲಾಗಿತ್ತು.

Sep 6, 2026 - 21:03
Sep 6, 2026 - 21:05
Akshaya Degree College: ಅಕ್ಷಯ ಪದವಿ ಕಾಲೇಜಿನಲ್ಲಿ 'ಫ್ರೆಶರ್ಸ್ ಡೇ' ಆಚರಣೆ

ಪುತ್ತೂರು: ವಿದ್ಯಾಭ್ಯಾಸದೊಂದಿಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಸಮಯ ಪಾಲನೆ, ಶಿಸ್ತು ಮತ್ತು ನಿರಂತರ ಪ್ರಯತ್ನಗಳೇ ಯಶಸ್ಸಿನ ಮೆಟ್ಟಿಲುಗಳು ಎಂದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲು ಹೇಳಿದರು.

ಈಚೆಗೆ ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 'ಆಹ್ವಾನಂ-2026' ಫ್ರೆಶರ್ಸ್ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸುವ ಉತ್ತಮ ಹಂತವಾಗಿದೆ. ಈ ಅವಧಿಯನ್ನು ಕೌಶಲ್ಯಾಧರಿತ ಶಿಕ್ಷಣದೊಂದಿಗೆ, ಸ್ಪಷ್ಟ ಗುರಿಯನ್ನು ನಮ್ಮದಾಗಿಸಿದರೆ, ಉಜ್ವಲ ಭವಿಷ್ಯ ಖಚಿತ ಎಂದು ತಿಳಿಸಿದರು.

ಈ ವೇಳೆ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. 6 ವಿಭಾಗದ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಬಹುಮಾನಗಳನ್ನು ತಮ್ಮದಾಗಿಸಿಕೊಂಡರು. 

ನಂತರ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕಾಗಿ ಮುಕ್ತ ಅವಕಾಶವನ್ನು ಕಲ್ಪಿಸಲಾಯಿತು. ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

ವೇದಿಕೆಯಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್, ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ, ಶೈಕ್ಷಣಿಕ ಸಲಹೆಗಾರ ಅಭಿಲಾಷ್ ಕ್ಷತ್ರೀಯ, ವಿದ್ಯಾರ್ಥಿ ಕ್ಷೇಮಪರಿಪಾಲನಾಧಿಕಾರಿ ಅಶೋಕ್ ರೈ, ಉಪ ಪ್ರಾಂಶುಪಾಲ ರಕ್ಷಣ ಟಿ.ಆರ್, ಐಕ್ಯೂಎಸಿ ನಿರ್ದೇಶಕ ರಶ್ಮಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೂರ್ಯ, ಕಾರ್ಯದರ್ಶಿ ದೇವಿಕಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಮೋಕ್ಷಾ, ಸ್ವರ್ಣಶ್ರೀ, ದೀಪಾ ಪ್ರಾರ್ಥಿಸಿದರು. ಪ್ರತೀಕ್ಷಾ, ಸ್ವಾಗತಿಸಿದರು. ದೀಕ್ಷಾ ವಂದಿಸಿದರು. ರಜೀನಾ ಭಾನು, ಗ್ರೀಷ್ಮ ಮತ್ತು ಸೂರ್ಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.