ಆಳ್ವಾಸ್ ಪ್ರಗತಿ ಉದ್ಯೋಗ ಮೇಳ: 24 ಸಾವಿರ ಉದ್ಯೋಗಾವಕಾಶ.. ನೋಂದಣಿ ಶುರು

Alva's Pragati Job Fair: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆ.7 ಮತ್ತು 8ರಂದು 'ಆಳ್ವಾಸ್ ಪ್ರಗತಿ' ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

Jul 31, 2026 - 17:14
ಆಳ್ವಾಸ್ ಪ್ರಗತಿ ಉದ್ಯೋಗ ಮೇಳ: 24 ಸಾವಿರ ಉದ್ಯೋಗಾವಕಾಶ.. ನೋಂದಣಿ ಶುರು

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆ.7 ಮತ್ತು 8ರಂದು 'ಆಳ್ವಾಸ್ ಪ್ರಗತಿ' ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 24,298 ಉದ್ಯೋಗಾವಕಾಶ ಲಭ್ಯವಿವೆ ಎಂದು ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರುಗುವ ಈ ಮೇಳದಲ್ಲಿ, ಸ್ಥಳದಲ್ಲಿಯೇ ನೋಂದಣಿಗೂ ಅವಕಾಶವಿದೆ. ಜೊತೆಗೆ ಆನ್‌ಲೈನ್ ಮೂಲವು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ www.alvaspragati.comಗೆ ಭೇಟಿ ನೀಡಬಹುದು.

ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ನರ್ಸಿಂಗ್ ಹಾಗೂ ಫಾರ್ಮಸಿ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಐಟಿ, ನಾನ್-ಐಟಿ, ಬ್ಯಾಂಕಿಂಗ್, ಹೆಲ್ತ್ ಕೇರ್, ಮಾರ್ಕೆಟಿಂಗ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಕೂಡ ಭಾಗವಹಿಸಲಿವೆ.

ದೂರದ ಊರುಗಳಿಂದ ಬರುವವರು ಮೊದಲೇ ತಿಳಿಸಿದರೆ, ಆ.6 ರಿಂದಲೇ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಗ್ರಾಮಾಂತರ ಪ್ರದೇಶದಿಂದ ಬರುವವರಿಗಾಗಿ ಉಚಿತ ಬಸ್ ವ್ಯವಸ್ಥೆಯಿದೆ. ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬೇಕಾಗಿದೆ.

ಹೆಚ್ಚಿನ ಮಾಹಿತಿಗೆ 9611750531, 9741440490, 9008907716 ಮತ್ತು 7975223865 ಸಂಖ್ಯೆಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.