Amartha: ಸೆ.18ಕ್ಕೆ ಅಮರ್ಥ ಸಿನಿಮಾ ಬಿಡುಗಡೆ

Amartha: ಕನ್ನಡದ ಬಹುನಿರೀಕ್ಷಿತ ಸಿನಿಮಾ ಅಮರ್ಥ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದ್ದು, ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Aug 6, 2026 - 15:09
Aug 6, 2026 - 15:10
Amartha: ಸೆ.18ಕ್ಕೆ ಅಮರ್ಥ ಸಿನಿಮಾ ಬಿಡುಗಡೆ

ಕನ್ನಡದ ಬಹುನಿರೀಕ್ಷಿತ ಸಿನಿಮಾ ಅಮರ್ಥ (Amartha) ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದ್ದು, ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಬಹುಪರಾಕ್ ಹಾಗೂ ಬುದ್ಧಿವಂತ-2 ಚಿತ್ರಗಳ ಬಳಿಕ, ಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ಶ್ರೀನಗರ ಕಿಟ್ಟಿ (Srinagara Kitty) ಹಾಗೂ ಮೇಘನಾ ರಾಜ್ (Meghana Raj) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 

ಗುರು ಹೆಗ್ಡೆ ಮತ್ತು ವಿನಯ್ ಪ್ರೀತಂ ಜಂಟಿಯಾಗಿ ಆಕ್ಷನ್ ಕಟ್ ಹೇಳಿದ್ದಾರೆ. ಪಂಚರಂಗಿ ಫಿಲಂಸ್ ಬ್ಯಾನರ್‌ನಲ್ಲಿ ನಿರ್ಮಿಸಲಾಗಿದೆ. ಸ್ನೇಹಿತರ ಸ್ಕೂಲ್ ಡೇಸ್‌ನಿಂದ ಶುರುವಾಗಿ, ಕೊನೆಗೆ ಎಲ್ಲರೂ ಒಂದೆಡೆ ಸೇರಿದಾಗ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥಾಹಂದರವಾಗಿದೆ. 

ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದ್ದು, ಚಿಕ್ಕಮಗಳೂರು, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ದೊರೆತಿದೆ.   

ಕೃತಿ ಶೆಟ್ಟಿ, ಉಷಾ ಭಂಡಾರಿ, ಮಂಜು ಭಾಷಿಣಿ, ಗುರು ಹೆಗ್ಡೆ ಹಾಗೂ ತಮ್ಮಣ್ಣ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗುರು ಪ್ರಶಾಂತ್ ರೈ ಕ್ಯಾಮೆರಾ ವರ್ಕ್ ಮಾಡಿದ್ದು, ಶಿನಾಯ್ ಜೋಸೆಫ್ & ಪಂಚಮ್ ಜೀವ ಮ್ಯಾಸಿಕ್ ನೀಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.