ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ 'ಹಿಂದಿ ದಿವಸ್' ಆಚರಣೆ

Ambika CBSE Vidyalaya: ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಈಚೆಗೆ 'ಹಿಂದಿ ದಿವಸ್' ಆಚರಿಸಲಾಯಿತು.

Sep 22, 2026 - 16:15
ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ  'ಹಿಂದಿ ದಿವಸ್' ಆಚರಣೆ

ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಈಚೆಗೆ 'ಹಿಂದಿ ದಿವಸ್' ಆಚರಿಸಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ 10 ತರಗತಿಯ ವಿದ್ಯಾರ್ಥಿಗಳು, ವಿಶೇಷ ಲಘು ನಾಟಕ ಪ್ರದರ್ಶಿಸಿದರು.  9 ತರಗತಿ ವಿದ್ಯಾರ್ಥಿ ಆದಿತ್ಯ ಕುಮಾರ್ ಹಿಂದಿ ಭಾಷೆಯ ಸೌಂದರ್ಯವನ್ನು ಸವಿಸ್ತಾರವಾಗಿ ವಿವರಿಸಿದರು. 

ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಮತ್ತು ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಆದ್ಯಾ ಶೆಣೈ ಸ್ವಾಗತಿಸಿದರು. ರುತುರಾಜ್ ವಂದಿಸಿದರು. ಮಾನ್ಯಲಕ್ಷ್ಮೀ ಎನ್.ಪಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.