ಅಂಬಿಕಾ ಪದವಿಪೂರ್ವ ವಿದ್ಯಾಲಯ:ನಾಟಾ ಕೋಚಿಂಗ್ತ ರಗತಿಗೆ ಚಾಲನೆ

Ambika PU College: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ, ಭಾನುವಾರ 'ನಾಟಾ ಕೋಚಿಂಗ್' ತರಗತಿಯ ಉದ್ಘಾಟನೆ ನಡೆಯಿತು.

Aug 12, 2026 - 18:30
Aug 12, 2026 - 19:42
ಅಂಬಿಕಾ ಪದವಿಪೂರ್ವ ವಿದ್ಯಾಲಯ:ನಾಟಾ ಕೋಚಿಂಗ್ತ ರಗತಿಗೆ ಚಾಲನೆ

ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ, ಭಾನುವಾರ 'ನಾಟಾ ಕೋಚಿಂಗ್' ತರಗತಿಯ ಉದ್ಘಾಟನೆ ನಡೆಯಿತು. 

ಸಂಸ್ಥೆಯ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ತರಗತಿಗಳಿಗೆ ಚಾಲನೆ ನೀಡಿ, ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಳ್ಳಬೇಕು. ಅದನ್ನು ಸಾಧಿಸಲು ಒಂದು ನೀಲ ನಕ್ಷೆ ಸಿದ್ಧಪಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಸಮಯದ ಸದುಪಯೋಗ ಅತ್ಯಂತ ಮುಖ್ಯವಾದ ವಿಚಾರ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಹಾಗೂ ಆಸಕ್ತಿಯನ್ನು ಸ್ಪಷ್ಟವಾಗಿ ಗುರುತಿಸಿಕೊಂಡು, ಭವಿಷ್ಯದ ಶಿಕ್ಷಣ & ವೃತ್ತಿಜೀವನದ ಬಗ್ಗೆ ಶೀಘ್ರ ಯೋಜನೆ ರೂಪಿಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಕಲಾ ವಿಷನ್ ಡಿಸೈನ್ ಆಪ್ಟಿಟ್ಯೂಡ್ ಸ್ಟಡಿ ಸೆಂಟರ್‌ನ ನಿರ್ದೇಶಕ ಸುನಿಲ್ ಅಬ್ರಹಾಂ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. 'ನಾಟಾ ಪರೀಕ್ಷೆ'ಯಲ್ಲಿ ಯಶಸ್ಸು ಸಾಧಿಸಲು ಸಮಯ ನಿರ್ವಹಣೆ, ನಿರಂತರ ಅಭ್ಯಾಸ ಮತ್ತು ಮೂಲಭೂತ ವಿನ್ಯಾಸ ಕೌಶಲ್ಯಗಳ ಅಭಿವೃದ್ಧಿ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.

ತಾಂತ್ರಿಕ ರೇಖಾಚಿತ್ರ, ದೃಶ್ಯ ಕಲ್ಪನೆ, ರೂಪ-ರಚನೆ, ಅನುಪಾತ, ವೀಕ್ಷಣಾ ಕೌಶಲ್ಯ ಮತ್ತು ಕಲಾತ್ಮಕ ಅಭಿವ್ಯಕ್ತಿಯಂತಹ ವಿವಿಧ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ವಿವರಿಸಿದರು. 

ನಾಟಾ ಪರೀಕ್ಷೆಯ ದೃಷ್ಟಿಯಿಂದ, ಪ್ರಸ್ತುತ ಮಾಹಿತಿಗಳ ಅರಿವು, ಕ್ರಿಟಿಕಲ್ ಥಿಂಕಿಂಗ್, ಸರಿಯಾದ ಮಾರ್ಗದ ಆಯ್ಕೆ, ತಾಂತ್ರಿಕ, ವಾಸ್ತುಶಿಲ್ಪ ಮತ್ತು ಕಲಾತ್ಮಕ ಚಿತ್ರಕಲೆಯ ಕುರಿತು ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್ ಇದ್ದರು. ವಿದ್ಯಾರ್ಥಿನಿ ಕುಮಾರಿ ಮನ್ವಿತಾ ಎಂ ಕಾರ್ಯಕ್ರಮ ನಿರೂಪಿಸಿದರು. ಧನ್ಯಶ್ರೀ ಮತ್ತು ಥಾನ್ಯ ಕೆ ಗೋಳ್ವರ್ಕರ್ ಪ್ರಾರ್ಥಿಸಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಹಿತೈಷಿಣಿ ಎಸ್ ವಂದಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.