ಅಂಬಿಕಾ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಅಭೂತಪೂರ್ವ ಗೆಲುವು!
Ambika PU College: ವಿದ್ಯಾಭಾರತಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ, ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ 'ಅಂಬಿಕಾ ಪದವಿ ಪೂರ್ವ ವಿದ್ಯಾಲಯ'ದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಮೂಲಕ ಕಾಲೇಜು ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಪುತ್ತೂರು: ವಿದ್ಯಾಭಾರತಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ, ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ 'ಅಂಬಿಕಾ ಪದವಿ ಪೂರ್ವ ವಿದ್ಯಾಲಯ'ದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಮೂಲಕ ಕಾಲೇಜು ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಈ ಪ್ರತಿಷ್ಠಿತ ಕ್ರೀಡಾಕೂಟವು ಈಚೆಗೆ ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ತರುಣ ವರ್ಗದ ವಿಭಾಗದಲ್ಲಿ ಕಾಲೇಜಿನ ದ್ವಿತೀಯ ಮತ್ತು ಪ್ರಥಮ ಪಿಯು ವಿದ್ಯಾರ್ಥಿಗಳು, ನಾನಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯ ವಿವರ:
ವಿಶ್ವೇಶ್ ಸಿ ರೈ (ದ್ವಿತೀಯ ಪಿಯುಸಿ): ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿ, ಮಿಂಚಿದ್ದಾರೆ.
ಸುಹಾನ್ ರೈ (ದ್ವಿತೀಯ ಪಿಯುಸಿ): ಉದ್ದ ಜಿಗಿತ ಸ್ಪರ್ಧೆಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು, ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಲಾಸ್ಯ ಸಂತೋಷ್ (ಪ್ರಥಮ ಪಿಯುಸಿ): ವಿದ್ಯಾರ್ಥಿನಿಯರ ವಿಭಾಗದ ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಈಟಿ ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇದರೊಂದಿಗೆ ರಾಜ್ಯ ಮಟ್ಟದಲ್ಲಿ ಈ ಮೂವರು ವಿದ್ಯಾರ್ಥಿಗಳು ತಮ್ಮ ಅದ್ಬುತ ಪ್ರತಿಭೆಯನ್ನು ತೋರಿಸಿದ್ದು, ದಕ್ಷಿಣ ಕ್ಷೇತ್ರ ಮಟ್ಟದ (South Zone) ಕ್ರೀಡಾಕೂಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ಸುತ್ತಿನಲ್ಲಿ ಹೆಚ್ಚಿನ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.