ಮುಂದಿನ ವಾರ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ ಸಾಧ್ಯತೆ!

Delimitation Bill: ಮುಂದಿನ ವಾರ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ ಸಾಧ್ಯತೆಯಿದೆ.

Nov 27, 2026 - 18:53
Nov 27, 2026 - 18:53
ಮುಂದಿನ ವಾರ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ ಸಾಧ್ಯತೆ!
ಚಿತ್ರಕೃಪೆ: https://www.hindustantimes.com/

ನವದೆಹಲಿ: ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮೂಲಕ ಮಹಿಳಾ ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಶುಕ್ರವಾರ ಅನುಮೋದನೆ ನೀಡಿದೆ. ಮುಂದಿನ ವಾರ ಆರಂಭಗೊಳ್ಳುವ ವಿಶೇಷ ಸಂಸತ್ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. 

ವಿವಿಧ ರಾಜ್ಯಗಳಲ್ಲಿನ ಲೋಕಸಭಾ ಸ್ಥಾನಗಳನ್ನು ಏಕರೂಪವಾಗಿ ಶೇಕಡ 50 ರಷ್ಟು ಹೆಚ್ಚಿಸಲು ಕೇಂದ್ರವು ಒಪ್ಪಿಗೆ ಸೂಚಿಸಿದೆ. ರಾಜ್ಯಗಳ ನಡುವಿನ ಸ್ಥಾನಗಳ ಹಂಚಿಕೆಯು ಮುಂದಿನ 25 ವರ್ಷಗಳ ಕಾಲ ಯಥಾಸ್ಥಿತಿಯಲ್ಲಿ ಇರುತ್ತದೆ ಎಂದು ಸರ್ಕಾರ ತಿಳಿಸಿದೆ. 

ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಸ್ಥಾನಗಳನ್ನು ಮರುಹಂಚಿಕೆ ಮಾಡಿದರೆ, ಹೆಚ್ಚಿನ ಜನಸಂಖ್ಯೆ ಬೆಳವಣಿಗೆಯನ್ನು ದಾಖಲಿಸಿರುವ ರಾಜ್ಯಗಳಿಗೆ ಹೋಲಿಸಿದರೆ, ತಮ್ಮ ಪ್ರಾತಿನಿಧ್ಯವು ಕಡಿಮೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದವು.

ಇದೇ ಏಪ್ರಿಲ್‌ನಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಆದರೆ, ಲೋಕಸಭೆಯಲ್ಲಿ ಅಂಗೀಕಾರ ದೊರೆಯಲಿಲ್ಲ. ಸದ್ಯ, ಸದನದಲ್ಲಿ ಸ್ಥಾನಗಳ ಲೆಕ್ಕಾಚಾರಗಳು ಬದಲಾಗಿವೆ. 

ಕೇಂದ್ರ ಸರ್ಕಾರ ಮಸೂದೆಯನ್ನು ಮರುಮಂಡಿಸುವ ಸಾಧ್ಯತೆಯಿರುವ ಹಿನ್ನೆಲೆ, ಜಂಟಿ ಕಾರ್ಯತಂತ್ರ ರೂಪಿಸಲು ಶನಿವಾರ ತಮ್ಮ ನಿವಾಸದಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ವಿಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕ್ಷೇತ್ರ ಮರುವಿಂಗಡಣೆಯ ಕ್ರಮವನ್ನು 'ಬಿಜೆಪಿಯ ಅತಿ ದೊಡ್ಡ ತಪ್ಪು' ಎಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಸತತ 3ನೇ ಬಾರಿಗೆ ಗೆಲುವು ಸಾಧಿಸಲು ಬಿಜೆಪಿ ಹೀಗೆ ಮಾಡಿದೆ ಎಂದು ಆರೋಪಿಸಿದ್ದಾರೆ. 

ನ.30 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನವು ಡಿ.3 ರಂದು ಮುಕ್ತಾಯಗೊಳ್ಳಲಿದೆ. ಈ ಅಧಿವೇಶನದಲ್ಲಿ ಯಾವ ಮಸೂದೆಗಳನ್ನು ಮಂಡಿಸಲಾಗುವುದು ಎಂಬುದನ್ನು ಕೇಂದ್ರ ಸರ್ಕಾರ ಇನ್ನೂ ಸ್ಪಷ್ಟಪಡಿಸಿಲ್ಲ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.