ಆಂಧ್ರ: ಅಲ್ಲೂರಿ ಸೀತಾರಾಮ ರಾಜು ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
Andhra Pradesh: ವಿಜಯನಗರಂ ಜಿಲ್ಲೆಯ ಭೋಗಪುರಂನಲ್ಲಿ, ನೂತನವಾಗಿ ನಿರ್ಮಿಸಿರುವ ಅಲ್ಲೂರಿ ಸೀತಾರಾಮ ರಾಜು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಆಂಧ್ರ ಪ್ರದೇಶ: ವಿಜಯನಗರಂ ಜಿಲ್ಲೆಯ ಭೋಗಪುರಂನಲ್ಲಿ, ನೂತನವಾಗಿ ನಿರ್ಮಿಸಿರುವ ಅಲ್ಲೂರಿ ಸೀತಾರಾಮ ರಾಜು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ಲೋಕಾರ್ಪಣೆಗೊಳಿಸಿದರು.
ಅವರಿಗೆ ರಾಜ್ಯಪಾಲ ಎಸ್.ಅಬ್ದುಲ್ ನಜೀರ್, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಸಾಥ್ ನೀಡಿದರು.
ಈ ವಿಮಾನ ನಿಲ್ದಾಣವನ್ನು ಸಾರ್ವಜನಿಕ - ಖಾಸಗಿ ಸಹಭಾಗಿತ್ವದಲ್ಲಿ 'ಜಿಎಂಆರ್ ವಿಶಾಖಪಟ್ಟಣಂ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್' ರೂ.5,640 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಿದೆ. 2014ರ ರಾಜ್ಯ ವಿಭಜನೆಯ ನಂತರ, ಆಂಧ್ರದ ಮೊಟ್ಟ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಇದಾಗಿದೆ.
ಇದೇ ವೇಳೆ ವಿಶಾಖಪಟ್ಟಣಂ ಸೆಮಿಕಂಡಕ್ಟರ್ ಸ್ಥಾವರ ಹಾಗೂ ಹೆದ್ದಾರಿಗಳು ಸೇರಿದಂತೆ ರೂ.17,900 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಲಾಯಿತು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.