ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ: ರಾಘವೇಶ್ವರ ಶ್ರೀ

Annabrahma Chaturmasya Dharmasabha: ಅಶೋಕೆಯ ಮೂಲಮಠದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಸೋಮವಾರ 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ, ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರವಚನ ನೀಡಿದರು.

Sep 15, 2026 - 11:44
ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ: ರಾಘವೇಶ್ವರ ಶ್ರೀ

ಗೋಕರ್ಣ: ಪ್ರವಾಹಕ್ಕೆ ವಿರುದ್ಧವಾಗಿ, ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

ಅಶೋಕೆಯ ಮೂಲಮಠದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಸೋಮವಾರ 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಪ್ರವಚನ ನೀಡಿದರು.

ಉತ್ತಮವಾದದ್ದನ್ನು ಕೆಡಿಸಿ, ಹಾನಿಕಾರಕವಾದುದನ್ನು ಸಮಾಜಕ್ಕೆ ಕೊಡುವುದೇ ಕಲಿಯುಗದ ಲಕ್ಷಣ. ಪ್ಲಾಸ್ಟಿಕ್, ಕೃತಕ ವಸ್ತುಗಳು ಅತ್ಯಂತ ಹಾನಿಕಾರಕ ಎಂದು ವಿಜ್ಞಾನವೇ ಒಪ್ಪಿಕೊಂಡಿದ್ದರೂ, ಅವುಗಳ ಉತ್ಪಾದನೆ ಮತ್ತು ಬಳಕೆ ನಿಲ್ಲುತ್ತಿಲ್ಲ. ಕುಡಿಯುವ ನೀರನ್ನು ಶುದ್ಧೀಕರಿಸಲು
'ಆರ್‌ಒ ಪ್ಯೂರಿಫೈಯರ್'ಗಳು ಇವೆಯಾದರೂ ಅದು ಪ್ಲಾಸ್ಟಿಕ್‌ನಿಂದಲೇ ಅವೃತವಾಗಿದೆ ಎಂದು ಹೇಳಿದರು.

ಆಯುರ್ವೇದದಲ್ಲಿ ನೀರನ್ನು ಶುದ್ದೀಕರಿಸುವ ಹಲವಾರು ವಿಧಾನಗಳನ್ನು ಸೂಚಿಸಲಾಗಿದೆ. ನಿರ್ವಾಪಣ, ಕ್ವಥನ, ಪ್ರಸಾದನ ಮುಂತಾದ ಕ್ರಮಗಳನ್ನು ಹೇಳಿದ್ದು, ಕತಕ, ಗೋಮೇಧಿಕ, ಶೈವಾಲಮೂಲ, ಸ್ಪಟಿಕ ಮಣಿಗಳನ್ನು ಬಳಸಿ ನೀರನ್ನು ಬಳಕೆಗೆ ಯೋಗ್ಯವಾಗಿಸುವ ವಿಧಾನಗಳನ್ನೂ ವಿವರಿಸಲಾಗಿದೆ. ಹೂವು ಹಾಗೂ ನೈಸರ್ಗಿಕ ಸುಗಂಧ ಪದಾರ್ಥಗಳನ್ನು ಬಳಸಿ, ನೀರಿನ ಮೌಲ್ಯ ವೃದ್ಧಿಸುವ ವಿಧಾನಗಳನ್ನು ವಿವರಿಸಿದರು.

ಪ್ಲಾಸ್ಟಿಕ್ ಹಾನಿಕಾರಕ ಎಂದು ಇಡೀ ಪ್ರಪಂಚವೇ ಹೇಳುತ್ತಿದೆ. ಆದರೆ, ಯಾರೂ ಅದನ್ನು ನಿಷೇಧ ಮಾಡುತ್ತಿಲ್ಲ. ಅದು ನಮ್ಮನ್ನು ಎಲ್ಲಾ ಕಡೆಯಿಂದ ಆವರಿಸಿಕೊಂಡಿದೆ. ನಾವು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾ, ಕೊನೇ ಪಕ್ಷ ನಮ್ಮ ಜೀವನವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.