ಮಂಗಳೂರು: ಅಶೋಕ್ ಸಿಂಘಾಲ್ ಜೀ ಶತಮಾನೋತ್ಸವ.. ನಾಳೆ ಉದ್ಘಾಟನಾ ಸಮಾರಂಭ
Ashok Singhal Ji Centenary: ರಾಮಜನ್ಮಭೂಮಿ ಹೋರಾಟದ ರೂವಾರಿ ಅಶೋಕ್ ಸಿಂಘಾಲ್ ಜೀ ಅವರ ಶತಮಾನೋತ್ಸವದ ಅಂಗವಾಗಿ, ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ನಾಳೆ ಉದ್ಘಾಟನಾ ಸಮಾರಂಭವು ಜರುಗಲಿದೆ.
ಮಂಗಳೂರು: ರಾಮಜನ್ಮಭೂಮಿ ಹೋರಾಟದ ರೂವಾರಿ ಅಶೋಕ್ ಸಿಂಘಾಲ್ ಜೀ ಅವರ ಶತಮಾನೋತ್ಸವದ ಅಂಗವಾಗಿ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ನಾಳೆ (ಅ.2) ಮಧ್ಯಾಹ್ನ 3:30ಕ್ಕೆ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಭೂವರಾಹ ಆಡಿಟೋರಿಯಂನಲ್ಲಿ ಉದ್ಘಾಟನಾ ಸಮಾರಂಭವು ಜರುಗಲಿದೆ.
ಎಡನೀರು ಮಠದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರು, ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮತ್ತು ಒಡಿಯೂರು ಗುರುದೇವದತ್ತ ಸಂಸ್ಥಾನದ ಸಾಧ್ವಿ ಮಾತಾನಂದಮಯೀ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಸಾಮಾಜಿಕ ಮುಖಂಡ ವೆಂಕಣ್ಣ ಕೊಯ್ಯೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೂತ್ರರೋಗ ತಜ್ಞ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಂಗಳೂರು ಅಧ್ಯಕ್ಷ ಡಾ. ಸದಾನಂದ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಆರ್‌ಎಸ್‌ಎಸ್ ಕ್ಷೇತ್ರೀಯ ಸಂಘ ಚಾಲಕ ಡಾ.ವಾಮನ ಶೆಣೈ, ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯ & ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಹಾಗೂ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಟಿ.ಎ.ಪಿ.ಶೆಣೈ ಅಥಿತಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕೋರಿದ್ದಾರೆ.