28 ಸಿಕ್ಸರ್ ಸಿಡಿಸಿ ವೈಭವ್ ಸೂರ್ಯವಂಶಿ ಅಬ್ಬರ: ಭಾರತಕ್ಕೆ ಗೆಲುವು

Asia Cup Rising Stars: ದೋಹಾದಲ್ಲಿ ಮಂಗಳವಾರ ನಡೆದ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಪಂದ್ಯದಲ್ಲಿ ಯುಎಇ ವಿರುದ್ಧ ಭಾರತ 'ಎ' ತಂಡವು ಭರ್ಜರಿ ಜಯ ಸಾಧಿಸಿದೆ.

Nov 24, 2026 - 18:13
Nov 24, 2026 - 18:13
28 ಸಿಕ್ಸರ್ ಸಿಡಿಸಿ ವೈಭವ್ ಸೂರ್ಯವಂಶಿ ಅಬ್ಬರ: ಭಾರತಕ್ಕೆ ಗೆಲುವು

Asia Cup Rising Stars: ದೋಹಾದಲ್ಲಿ ಮಂಗಳವಾರ ನಡೆದ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಪಂದ್ಯದಲ್ಲಿ ಯುಎಇ ವಿರುದ್ಧ ಭಾರತ 'ಎ' ತಂಡವು ಭರ್ಜರಿ ಜಯ ಸಾಧಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಯುಎಇ, ಹರ್‌ಪ್ರೀತ್ ಸಿಂಗ್ ಭಾಟಿಯಾ ಅವರ 130 ರನ್ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 249 ರನ್ ಕಲೆಹಾಕಿತು. ಭಾರತದ ಪರ ಅರ್ಷದ್ ಖಾನ್ 4 ವಿಕೆಟ್ ಕಬಳಿಸಿ ಮಿಂಚಿದರು. 

ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 'ಎ' ತಂಡವು ಬರೀ 14.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ, ಗೆದ್ದು ಬೀಗಿತು.

ಹೊಸ ದಾಖಲೆ: 

ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ, ಕೇವಲ 53 ಎಸೆತಗಳಲ್ಲಿ 28 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 204 ರನ್ ಸಿಡಿಸಿ, ನೂತನ ದಾಖಲೆ ನಿರ್ಮಿಸಿದ್ದಾರೆ. ಜೊತೆಗೆ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಮತ್ತು ದ್ವಿಶತಕದ ದಾಖಲೆಗಳನ್ನು ಸಹ ಮುರಿದ್ದಾರೆ.

ಈ ಹಿಂದೆ, ನ್ಯೂಜಿಲೆಂಡ್‌ನ ಚಾಡ್ ಬೋವ್ಸ್ ಅವರ ಹೆಸರಿನಲ್ಲಿ ಈ ದಾಖಲೆ ಇತ್ತು. 2024ರಲ್ಲಿ ಒಟಾಗೊ ವಿರುದ್ಧ ಕ್ಯಾಂಟರ್‌ಬರಿ ತಂಡದ ಪರವಾಗಿ 103 ಎಸೆತಗಳಲ್ಲಿ 200 ರನ್ ಬಾರಿಸಿದ್ದರು. ಭಾರತದ ಪರವಾಗಿ, ಈ ಹಿಂದಿನ ದಾಖಲೆಯು ಎನ್.ಜಗದೀಶನ್ (114 ಎಸೆತಗಳು) ಹೆಸರಿನಲ್ಲಿತ್ತು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.