Asian Games-2026: ಪಾಕ್ ವಿರುದ್ಧ ಭಾರತಕ್ಕೆ ಜಯ.. ಸಿಕ್ತು ಚಿನ್ನ!

Asian Games-2026: 'ಏಷ್ಯನ್ ಗೇಮ್ಸ್-2026'ರ ಪುರುಷರ ಟಿ20 ಕ್ರಿಕೆಟ್ ಫೈನಲ್‌ನಲ್ಲಿ, ಶನಿವಾರ ಪಾಕಿಸ್ತಾನ ವಿರುದ್ಧ ಭಾರತವು ಜಯ ಗಳಿಸಿದ್ದು, ಚಿನ್ನದ ಪದಕಕ್ಕೂ ಭಾಜನವಾಗಿದೆ.

Oct 4, 2026 - 13:02

ಟಾಸ್ ಗೆದ್ದು ಭಾರತವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ನಿಗದಿತ 20 ಓವರ್‌ಗಳಲ್ಲಿ 211/6 ರನ್ ಕಲೆಹಾಕಿತು. ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 61 ರನ್ ಬಾರಿಸಿದರೆ, ತಿಲಕ್ ವರ್ಮಾ 22 ಎಸೆತಗಳಲ್ಲಿ ಅಜೇಯ 51 ರನ್ ಸಿಡಿಸಿದರು. 

ಪಾಕಿಸ್ತಾನವು ಇದೇ ಓವರ್‌ಗಳಲ್ಲಿ 192/6 ರನ್ ಗಳಿಸಲಷ್ಟೇ ಶಕ್ತವಾಯಿತು. ಹಸನ್ ನವಾಜ್ ಏಕಾಂಗಿ ಹೋರಾಟ ನಡೆಸಿ, 96 ರನ್ ಗಳಿಸಿದರು. 

ವೈಭವ್ ಸೂರ್ಯವಂಶಿ ಹೊಸ ದಾಖಲೆ:

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪರ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಕ್ರೀಡಾಪಟು ಆಗಿ ವೈಭವ್ ಸೂರ್ಯವಂಶಿ ಹೊರಹೊಮ್ಮಿದ್ದಾರೆ. 

ಈ ಮೊದಲು, 2018ರ ಇದೇ ಕ್ರೀಡಾಕೂಟದಲ್ಲಿ 10-ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ 16 ವರ್ಷದ ಶೂಟರ್ ಸೌರಭ್ ಚೌಧರಿ ಚಿನ್ನದ ಪದಕ ಗೆದ್ದಿದ್ದರು. ಸದ್ಯ ಅವರ ದಾಖಲೆಯನ್ನು ವೈಭವ್ ಸೂರ್ಯವಂಶಿ ಮುರಿದಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.