Asian Games-2026: ಅಬ್ಬರಿಸಿದ ವನಿತೆಯರು.. ಭಾರತಕ್ಕೆ ಚಿನ್ನ

Asian Games-2026: ಏಷ್ಯನ್ ಗೇಮ್ಸ್‌-2026ರ ಮಹಿಳಾ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 147 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ್ದು, ಚಿನ್ನದ ಪದಕವನ್ನು ಜಯಿಸಿದೆ.

Sep 22, 2026 - 14:33
Asian Games-2026: ಅಬ್ಬರಿಸಿದ ವನಿತೆಯರು.. ಭಾರತಕ್ಕೆ ಚಿನ್ನ

Asian Games-2026: ಜಪಾನ್‌ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಏಷ್ಯನ್ ಗೇಮ್ಸ್‌-2026ರ, ಮಹಿಳಾ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 147 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಮೂಲಕ ಚಿನ್ನದ ಪದಕವನ್ನು ಜಯಿಸಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತವು 216/3 ರನ್‌ಗಳನ್ನು ದಾಖಲಿಸಿತು. ಇದು 'ಏಷ್ಯನ್ ಗೇಮ್ಸ್' ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಆಗಿದೆ.  

ಸ್ಮೃತಿ ಮಂಧಾನ (79 ರನ್) ಹಾಗೂ ಶಫಾಲಿ ವರ್ಮಾ (48 ರನ್) ಅಬ್ಬರಿಸಿದರು. ರಿಚಾ ಘೋಷ್ ಬರೀ 22 ಎಸೆತಗಳಲ್ಲಿ 49 ರನ್ ಬಾರಿಸಿ ಅಜೇಯರಾಗಿ ಉಳಿದರು.

ಈ 217 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಶ್ರೀಲಂಕಾ, ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿತು. 69 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಒಪ್ಪಿಸಿತು. ಆದರೂ ನಾಯಕಿ ಚಾಮರಿ ಅಟಪಟ್ಟು ದಿಟ್ಟ ಹೋರಾಟ ತೋರಿಸಿದರು. 29 ರನ್ ಗಳಿಸಿದರು. ಇದರೊಂದಿಗೆ ಶ್ರೀಲಂಕಾ ತಂಡವು ಬೆಳ್ಳಿ ಪದಕಕ್ಕೆ ತೃಪ್ತಿ ಪಡೆದುಕೊಂಡಿತು.

ಭಾರತದ ಪರ ದೀಪ್ತಿ ಶರ್ಮಾ 3 ವಿಕೆಟ್ ಕಬಳಿಸಿದರು. ಶಫಾಲಿ ವರ್ಮಾ, ಶ್ರೇಯಾಂಕ ಪಾಟೀಲ್ ಮತ್ತು ಶ್ರೀಚರಣಿ ತಲಾ 2 ವಿಕೆಟ್ ತೆಗೆದರು.

ಇನ್ನು, ಬಾಂಗ್ಲಾದೇಶವನ್ನು 31 ರನ್‌ಗಳಿಂದ ಸೋಲಿಸುವುದರೊಂದಿಗೆ, ಪಾಕಿಸ್ತಾನವು ಕಂಚಿನ ಪದಕಕ್ಕೆ ಭಾಜನವಾಗಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 145/8 ರನ್ ಪೇರಿಸಿತು. ಆದಾಗ್ಯೂ ಬಾಂಗ್ಲಾದೇಶವು 20 ಓವರ್‌ಗಳಲ್ಲಿ 114/7 ರನ್ ಗಳಿಸಲಷ್ಟೇ ಶಕ್ತವಾಯಿತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.