ಆಸ್ಟ್ರೋಬೇಸ್: ಕರ್ನಾಟಕದ ರಾಕೆಟ್ ಉತ್ಪಾದನಾ ಕ್ಷೇತ್ರದಲ್ಲಿ ರೂ.500 ಕೋಟಿ ಹೂಡಿಕೆ!
Karnataka: ಕರ್ನಾಟಕದ ರಾಕೆಟ್ ಉತ್ಪಾದನಾ ಕ್ಷೇತ್ರದಲ್ಲಿ ರೂ.500 ಕೋಟಿ ಹೂಡಿಕೆ ಮಾಡುವುದಾಗಿ 'ಆಸ್ಟ್ರೋಬೇಸ್' ಘೋಷಣೆ ಮಾಡಿದೆ.
ಬೆಂಗಳೂರು: ಬೆಂಗಳೂರು ಮೂಲದ 'ಆಸ್ಟ್ರೋಬೇಸ್ ಸ್ಪೇಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯು ಆದಿನಾರಾಯಣ ಹೊಸಹಳ್ಳಿ ಫೇಸ್-II SEZನಲ್ಲಿ 10 ಎಕರೆ ಪ್ರದೇಶದಲ್ಲಿ ರಾಕೆಟ್ ಎಂಜಿನ್ಗಳು, ಪ್ರೊಪಲ್ಷನ್ ವ್ಯವಸ್ಥೆಗಳು ಮತ್ತು ಉಡಾವಣಾ ವಾಹನಗಳ ರಚನಾತ್ಮಕ ಬಿಡಿಭಾಗಗಳ ಉತ್ಪಾದನೆಗಾಗಿ ರೂ.500 ಕೋಟಿ ಹೂಡಿಕೆಯ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪಿಸಲು ಉದ್ದೇಶಿಸಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ 'ಎಕ್ಸ್'ನಲ್ಲಿಯೂ ಪೋಸ್ಟ್ ಮಾಡಿದ್ದು, ಸಂಸ್ಥೆಯ ಹಿರಿಯ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಕಂಪನಿಯ ವಿಸ್ತರಣಾ ಯೋಜನೆಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು ಎಂದಿದ್ದಾರೆ.

ಜಾಗತಿಕವಾಗಿ ಬೆರಳೆಣಿಕೆಯಷ್ಟು ಬಾಹ್ಯಾಕಾಶ ತಂತ್ರಜ್ಞಾನ ಕಂಪನಿಗಳು ಮಾತ್ರ ಅಭಿವೃದ್ಧಿಪಡಿಸುತ್ತಿರುವ ಅತ್ಯಂತ ಸಂಕೀರ್ಣ ತಂತ್ರಜ್ಞಾನವಾದ 'ಫುಲ್-ಫ್ಲೋ ಸ್ಟೇಜ್ಡ್ ಕಂಬಸ್ಟನ್' ರಾಕೆಟ್ ಎಂಜಿನ್ ಅನ್ನು ಭಾರತದಲ್ಲೇ ಪ್ರಥಮ ಬಾರಿಗೆ ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ಆಸ್ಟ್ರೋಬೇಸ್ ತೊಡಗಿಸಿಕೊಂಡಿದೆ. ಇದರೊಂದಿಗೆ ಮರುಬಳಕೆ ಮಾಡಬಹುದಾದ ಮಧ್ಯಮ ಸಾಮರ್ಥ್ಯದ ಉಡಾವಣಾ ವಾಹನಗಳನ್ನೂ ಅಭಿವೃದ್ಧಿಪಡಿಸುತ್ತಿದೆ ಎಂದು ತಿಳಿಸಿದ್ದಾರೆ.
ಈ ಪ್ರಸ್ತಾವಿತ ಹೂಡಿಕೆಯು ಖಾಸಗಿ ಬಾಹ್ಯಾಕಾಶ ವಲಯದಲ್ಲಿ ಕರ್ನಾಟಕದ ಬೆಳೆಯುತ್ತಿರುವ ಸಾಮರ್ಥ್ಯ ಮತ್ತು ಜಾಗತಿಕ ಸ್ಪರ್ಧಾತ್ಮಕತೆಗೆ ಮತ್ತಷ್ಟು ಬಲ ನೀಡಲಿದೆ. ಸ್ವದೇಶಿ ಆವಿಷ್ಕಾರಗಳಿಗೆ ಅಗತ್ಯ ಪ್ರೋತ್ಸಾಹ ಮತ್ತು ಸಹಕಾರ ನೀಡುವ ಮೂಲಕ ಕರ್ನಾಟಕವನ್ನು ಜಾಗತಿಕ ಏರೋಸ್ಪೇಸ್ ಹಾಗೂ ಬಾಹ್ಯಾಕಾಶ ತಂತ್ರಜ್ಞಾನ ಉತ್ಪಾದನೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.